ದೇಶ

ಡಿಸೆಂಬರ್ 14ರೊಳಗೆ ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಸಿಎಂ ಫಡ್ನವಿಸ್ ರಿಂದ ಪ್ರಧಾನಿ ಮೋದಿ ಭೇಟಿ

ಶಿವಸೇನಾ ನಾಯಕ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುತ್ತಿಲ್ಲ ಎಂದು ಅವರ ಕಚೇರಿ ತಿಳಿಸಿದೆ.

ಡಿಸೆಂಬರ್ 14ರೊಳಗೆ ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಸಿಎಂ ಫಡ್ನವಿಸ್ ರಿಂದ ಪ್ರಧಾನಿ ಮೋದಿ ಭೇಟಿ
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಹಾಗೂ ಅಜಿತ್ ಪವಾರ್
Published On :

ಮುಂಬೈ: ದೇವೇಂದ್ರ ಫಡ್ನವೀಸ್ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ವಿಸ್ತರಣೆ ಡಿಸೆಂಬರ್ 14 ರೊಳಗೆ ನಡೆಯಲಿದೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಬುಧವಾರ ಹೇಳಿದ್ದಾರೆ.

ಫಡ್ನವಿಸ್ ಅವರು ಬುಧವಾರ ದೆಹಲಿಗೆ ತೆರಳಿದ್ದು, ಇದು ಸೌಜನ್ಯದ ಭೇಟಿಯಾಗಿದೆ. ಫಡ್ನವಿಸ್ ಅವರು ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪಾಧ್ಯಕ್ಷ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.

ಶಿವಸೇನಾ ನಾಯಕ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುತ್ತಿಲ್ಲ ಎಂದು ಅವರ ಕಚೇರಿ ತಿಳಿಸಿದೆ.

ಪಿಟಿಐ ಜೊತೆ ಮಾತನಾಡಿದ ಬಿಜೆಪಿ ನಾಯಕರೊಬ್ಬರು, ಶಿವಸೇನೆಗೆ ಗೃಹ ಖಾತೆ ಸಿಗುವುದಿಲ್ಲ ಮತ್ತು ಕಂದಾಯ ಖಾತೆಯನ್ನು ಹಂಚಿಕೆ ಮಾಡುವ ಸಾಧ್ಯತೆಯೂ ಇಲ್ಲ ಎಂದು ಹೇಳಿದ್ದಾರೆ.

ಮೂರು ಪಕ್ಷಗಳು(ಮಹಾಯುತಿ ಮಿತ್ರಪಕ್ಷಗಳಾದ ಬಿಜೆಪಿ, ಶಿವಸೇನೆ ಮತ್ತು ಎನ್‌ಸಿಪಿ) ಸರ್ಕಾರದಲ್ಲಿ ಭಾಗಿಯಾಗಿರುವುದರಿಂದ ಮಾತುಕತೆ ವಿಳಂಬವಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

"ಡಿಸೆಂಬರ್ 14 ರೊಳಗೆ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ. ಶಿವಸೇನೆಗೆ ಗೃಹ ಇಲಾಖೆ ಹಂಚಿಕೆ ಮಾಡುವ ಸಾಧ್ಯತೆ ಇಲ್ಲ. ಆದರೆ ಶಿವಸೇನೆಗೆ ನಗರಾಭಿವೃದ್ಧಿ ಸಿಗಬಹುದು" ಎಂದು ಹೆಸರು ಹೇಳಲು ಇಚ್ಛಿಸದ ನಾಯಕರೊಬ್ಬರು ಹೇಳಿದ್ದಾರೆ.

ಬಿಜೆಪಿಯು ಸಿಎಂ ಸ್ಥಾನ ಸೇರಿದಂತೆ 21 ರಿಂದ 22 ಸಚಿವ ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ನಾಲ್ಕರಿಂದ ಐದು ಸಚಿವ ಸ್ಥಾನಗಳನ್ನು ಖಾಲಿ ಇಡಬಹುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.