ದೇಶ

ಪತಿ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸಲು ಕಾನೂನು ದುರುಪಯೋಗ ಮಾಡಿಕೊಳ್ಳದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 498A(ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳದಿಂದ ಮಹಿಳೆಯರ ರಕ್ಷಣೆ) ದುರುಪಯೋಗದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ಪತಿ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸಲು ಕಾನೂನು ದುರುಪಯೋಗ ಮಾಡಿಕೊಳ್ಳದಂತೆ ಸುಪ್ರೀಂ ಕೋರ್ಟ್ ಎಚ್ಚರಿಕೆ
ಸುಪ್ರೀಂ ಕೋರ್ಟ್
Published On :

ನವದೆಹಲಿ: ವೈವಾಹಿಕ ವಿವಾದ ಪ್ರಕರಣಗಳಲ್ಲಿ ಕಾನೂನುಗಳ ದುರುಪಯೋಗದ ಬಗ್ಗೆ ಸುಪ್ರೀಂ ಕೋರ್ಟ್ ಬುಧವಾರ ಕಠಿಣ ಎಚ್ಚರಿಕೆ ನೀಡಿದ್ದು, "ವೈಯಕ್ತಿಕ ದ್ವೇಷ ಸಾಧಿಸಲು ಪತಿ ಮತ್ತು ಅವರ ಕುಟುಂಬದ ವಿರುದ್ಧ ಸೆಕ್ಷನ್ 498(A) ಸಾಧನವಾಗಿ" ಬಳಸಬಾರದು ಎಂದು ಹೇಳಿದೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 498A(ಕೌಟುಂಬಿಕ ದೌರ್ಜನ್ಯ ಮತ್ತು ಕಿರುಕುಳದಿಂದ ಮಹಿಳೆಯರ ರಕ್ಷಣೆ) ದುರುಪಯೋಗದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ನಿರ್ದಿಷ್ಟವಾಗಿ ಮಹಿಳೆಯರು ತಮ್ಮ ಪತಿ ಮತ್ತು ಅವರ ಕುಟುಂಬದ ವಿರುದ್ಧ ತನ್ನ ಅವಿವೇಕದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಬಳಸಿಕೊಳ್ಳುತ್ತಿದ್ದಾರೆ ಎಂದು ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠ ಹೇಳಿದೆ.

ವಿಚ್ಛೇದನಕ್ಕೆ ಪತಿ ಮನವಿ ಸಲ್ಲಿಸಿದ ನಂತರ ಪತ್ನಿ ತನ್ನ ಪತಿ ಮತ್ತು ಅತ್ತೆಯ ವಿರುದ್ಧ ಸೆಕ್ಷನ್ 498 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣವನ್ನು ರದ್ದುಗೊಳಿಸಲು ತೆಲಂಗಾಣ ಹೈಕೋರ್ಟ್ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಪತಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪತಿ ಮತ್ತು ಆತನ ಕುಟುಂಬದ ವಿರುದ್ಧ ವೈಯಕ್ತಿಕ ದ್ವೇಷ ಸಾಧಿಸಲು ಕೆಲ ಮಹಿಳೆಯರು ಈ ನಿಬಂಧನೆಯನ್ನು ಸಾಧನವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿ, ಪ್ರಕರಣವನ್ನು ರದ್ದುಗೊಳಿಸಿದೆ.

ಈ ನಿರ್ದಿಷ್ಟ ಪ್ರಕರಣದಲ್ಲಿ, ಕ್ರೌರ್ಯದ ಆರೋಪ ಹೊತ್ತಿರುವ ವ್ಯಕ್ತಿ ಮತ್ತು ಆತನ ಕುಟುಂಬದ ಪರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಮತ್ತು ಪ್ರಕರಣವನ್ನು ಮುಂದುವರಿಸಲು ಅನುಮತಿಸುವ ಹೈಕೋರ್ಟ್‌ ನಿರ್ಧಾರವನ್ನು ರದ್ದುಗೊಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.