2023 ರಲ್ಲಿ ವಿದೇಶಗಳಲ್ಲಿ ನಡೆದ ದಾಳಿಯಲ್ಲಿ 86 ಭಾರತೀಯರು ಸಾವು: ರಾಜ್ಯಸಭೆಗೆ ಕೇಂದ್ರ ಮಾಹಿತಿ
2022ರಲ್ಲಿ 57 ಮತ್ತು 2021 ರಲ್ಲಿ 29 ಕೊಲೆ ಪ್ರಕರಣಗಳಿಗೆ ಹೋಲಿಸಿದರೆ ಇದು ತೀವ್ರ ಹೆಚ್ಚಳವನ್ನು ಸೂಚಿಸುತ್ತದೆ ಎಂದು ಗುರುವಾರ ರಾಜ್ಯಸಭೆಗೆ ಸರ್ಕಾರ ಮಾಹಿತಿ ನೀಡಿದೆ.

ನವದೆಹಲಿ: ವಿದೇಶದಲ್ಲಿ ನೆಲೆಸಿರುವ ಭಾರತೀಯರ ಮೇಲಿನ ದಾಳಿಗಳು ಮತ್ತು ಕೊಲೆ ಪ್ರಕರಣಗಳು ಹೆಚ್ಚಳವಾಗುತ್ತಿರುವುದಕ್ಕೆ ತೀವ್ರ ಕಳವಳ ವ್ಯಕ್ತಪಡಿಸಿದ ಕೇಂದ್ರ ಸರ್ಕಾರ, 2023 ರಲ್ಲಿ ಯುನೈಟೆಡ್ ಸ್ಟೇಟ್ಸ್, ಸೌದಿ ಅರೇಬಿಯಾ ಮತ್ತು ಕೆನಡಾ ಸೇರಿದಂತೆ ವಿವಿಧ ದೇಶಗಳಲ್ಲಿ ನಡೆದ ದಾಳಿಗಳು ಮತ್ತು ಹತ್ಯೆಗಳಲ್ಲಿ 86 ಭಾರತೀಯರು ಮೃತಪಟ್ಟಿದ್ದಾರೆ ಎಂದು ರಾಜ್ಯಸಭೆಗೆ ತಿಳಿಸಿದೆ.
2022ರಲ್ಲಿ 57 ಮತ್ತು 2021 ರಲ್ಲಿ 29 ಪ್ರಕರಣಗಳಿಗೆ ಹೋಲಿಸಿದರೆ ಇದು ತೀವ್ರ ಹೆಚ್ಚಳವನ್ನು ಸೂಚಿಸುತ್ತದೆ ಎಂದು ಗುರುವಾರ ರಾಜ್ಯಸಭೆಗೆ ಸರ್ಕಾರ ಮಾಹಿತಿ ನೀಡಿದೆ.
2023 ರಲ್ಲಿ ಅಮೆರಿಕದಲ್ಲಿ 12 ಮಂದಿ ಹತ್ಯೆಯಾಗಿದ್ದಾರೆ. 2022 ರಲ್ಲಿ ಅಮೆರಿಕದಲ್ಲಿ 10 ಮಂದಿ ಕೊಲೆಯಾಗಿದ್ದರು. ಸೌದಿ ಅರೇಬಿಯಾದಲ್ಲಿ 2023 ರಲ್ಲಿ 10 ಪ್ರಕರಣಗಳು ವರದಿಯಾಗಿವೆ. 2022ರಲ್ಲಿ 6 ಪ್ರಕರಣ ವರದಿಯಾಗಿದ್ದವು.
ಇನ್ನು ಕೆನಡಾದಲ್ಲೂ ಗಮನಾರ್ಹ ಏರಿಕೆ ಕಂಡಿದ್ದು, 2023 ರಲ್ಲಿ 10 ಭಾರತೀಯ ಪ್ರಜೆಗಳು ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಏತನ್ಮಧ್ಯೆ, ಫಿಲಿಪೈನ್ಸ್ ಇದೇ ಅವಧಿಯಲ್ಲಿ ಐದು ಅಂತಹ ಪ್ರಕರಣಗಳನ್ನು ದಾಖಲಿಸಿದೆ.
ವಿದೇಶದಲ್ಲಿರುವ ಭಾರತೀಯರ ಸುರಕ್ಷತೆ ಮತ್ತು ಯೋಗಕ್ಷೇಮವು ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಕೇಂದ್ರ ಸರ್ಕಾರ ಮೇಲ್ಮನೆಗೆ ಭರವಸೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



