ಅಲ್ಲು ಅರ್ಜುನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು
ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದರು.

ಹೈದರಾಬಾದ್: 'ಪುಷ್ಪ-2: ದಿ ರೂಲ್' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ತೆಲುಗು ಸೂಪರ್‌ಸ್ಟಾರ್ ಅಲ್ಲು ಅರ್ಜುನ್‌ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಮೃತಪಟ್ಟು, ಆಕೆಯ ಮಗ ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಇದೀಗ ಹೈಕೋರ್ಟ್ ಮಧ್ಯಂತರ ಜಾಮೀನ ನೀಡಿದೆ. ಇದರಿಂದ ಅಲ್ಲು ಅರ್ಜುನ್ 14 ದಿನಗಳ ಜೈಲು ವಾಸದಿಂದ ತಪ್ಪಿಸಿಕೊಂಡಂತಾಗಿದೆ. ಆದರೆ ಒಂದು ದಿನ ಅಥವಾ ಸೋಮವಾರದವರೆಗೆಯಾದರೂ ಜೈಲು ವಾಸ ಅನುಭವಿಸುವ ಸಾಧ್ಯತೆ ಇದೆ.
ಎಫ್ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಪರ ವಕೀಲರು ತೆಲಂಗಾಣ ಹೈಕೋರ್ಟ್ನಲ್ಲಿ ಅರ್ಜಿ ಹಾಕಿದ್ದರು. ಶಾರುಖ್ ಖಾನ್ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಉಲ್ಲೇಖ ಮಾಡಿ ಅಲ್ಲು ಅರ್ಜುನ್ ಪರ ವಕೀಲರು ವಾದ ಮಂಡಿಸಿದರು. ಆದರೆ ಹೈಕೋರ್ಟ್ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ. ವಾದ ಮುಂದುವರೆಸಿದ ಅಲ್ಲು ಅರ್ಜುನ್ ಪರ ವಕೀಲರು ಮಧ್ಯಂತರ ಜಾಮೀನಿದೆ ಮನವಿ ಮಾಡಿದರು.
ಅಲ್ಲು ಅರ್ಜುನ್‌ಗೆ, ರೇವತಿ ಸಾವಿಗೆ ನೇರ ಸಂಬಂಧವೇ ಇಲ್ಲ. ಇದು ಅಚಾನಕ್ಕಾಗಿ ನಡೆದಿರುವ ಘಟನೆ. ಇಂಥಹಾ ಅಪಘಾತಗಳು ಸಾಕಷ್ಟು ನಡೆಯುತ್ತಲೇ ಇರುತ್ತವೆ. ಈ ರೀತಿಯ ಘಟನೆಗಳಿಗೆ ನಟರನ್ನು, ರಾಜಕಾರಣಿಗಳನ್ನು ಕೊಲೆಗಾರರು ಎನ್ನಲಾಗದು ಎಂದು ವಾದಿಸಿದರು. ಹಲವು ಇತರೆ ಪ್ರಕರಣಗಳ ಉಲ್ಲೇಖಗಳನ್ನು ಸಹ ವಕೀಲರು ನ್ಯಾಯಾಲಯದಲ್ಲಿ ಮಾಡಿದರು. ವಾದ ಆಲಿಸಿದ ನ್ಯಾಯಮೂರ್ತಿಗಳು ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ.
ಇದಕ್ಕೂ ಮುನ್ನ ಮೃತ ಮಹಿಳೆ ರೇವತಿಯ ಪತಿ ಭಾಸ್ಕರ್ ಮಾತನಾಡಿ, ಆಕೆಯ ಸಾವಿಗೆ ನಟ ಅಲ್ಪು ಅರ್ಜುನ್ ಕಾರಣವಲ್ಲ. ಅವರ ತಪ್ಪಿಲ್ಲ. ಅಗತ್ಯವಿದ್ದರೆ ಪ್ರಕರಣವನ್ನು ಹಿಂಪಡೆಯಲು ಸಿದ್ಧ ಎಂದು ಹೇಳಿದರು. ಅಲ್ಲದೆ ಅಲ್ಲು ಅರ್ಜುನ್ ಬಂಧನದ ಬಗ್ಗೆ ತನಗೆ ಮಾಹಿತಿ ಇಲ್ಲ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


