Pushpa-2: ಪ್ರೀಮಿಯರ್ ಶೋ ವೇಳೆ ದುರಂತ; ನಟ ಅಲ್ಲು ಅರ್ಜುನ್ ತಪ್ಪಿಲ್ಲ, ಕೇಸ್ ಹಿಂಪಡೆಯುತ್ತೇನೆ- ಮೃತ ಮಹಿಳೆ ಪತಿ
ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

ಹೈದರಾಬಾದ್: ಡಿಸೆಂಬರ್ 4ರಂದು ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ನಡೆದ ದುರಂತಕ್ಕೆ ನಟ ಅಲ್ಲು ಅರ್ಜುನ್ ಹೊಣೆಯಲ್ಲ ಎಂದು ಘಟನೆಯಲ್ಲಿ ಮೃತಪಟ್ಟ ಮಹಿಳೆಯ ಪತಿ ಹೇಳಿದ್ದಾರೆ.
ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈದರಾಬಾದ್ ಪೊಲೀಸರು ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದರು. ಬಳಿಕ ನಾಂಪಲ್ಲಿ ನ್ಯಾಯಾಲಯ ಅಲ್ಲು ಅರ್ಜುನ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳೆಯ ಪತಿ ಭಾಸ್ಕರ್,ಘಟನೆ ಕುರಿತು ದಾಖಲಿಸಿರುವ ಕೇಸ್ ನ್ನು ವಾಪಸ್ ಪಡೆಯುವುದಾಗಿ ತಿಳಿಸಿದರು. ಘಟನೆಗೆ ಥಿಯೇಟರ್ ಗೆ ಬರುತ್ತಿದ್ದ ಅಲ್ಲು ಅರ್ಜುನ್ ಕಾರಣವಲ್ಲ, ಕೇಸ್ ವಾಪಸ್ ಪಡೆಯಲು ಸಿದ್ದನಿದ್ದೇನೆ ಎಂದರು.
ಅರ್ಜುನ್ ಬಂಧನದ ಬಗ್ಗೆ ತನಗೆ ಪೊಲೀಸರು ಮಾಹಿತಿ ನೀಡಲಿಲ್ಲ. ಚಾನೆಲ್ ಗಳಿಂದ ಸುದ್ದಿ ತಿಳಿಯಿತು ಎಂದು ಭಾಸ್ಕರ್ ಹೇಳಿದರು.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರ ಎಂಟು ವರ್ಷದ ಮಗ ಹೈದರಾಬಾದ್‌ನ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಯುವತಿಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಶುಕ್ರವಾರ ಅಲ್ಲು ಅರ್ಜುನ್ ಅವರನ್ನು ಬಂಧಿಸಿದ್ದಾರೆ. ಆದರೆ, ತೆಲಂಗಾಣ ಹೈಕೋರ್ಟ್ ಅವರಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನು ನೀಡಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



