ದೇಶ

ಮಹಿಳಾ ಡಾಕ್ಟರ್ ರೇಪ್- ಕೊಲೆ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ, ಆರ್ ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲಗೆ ಜಾಮೀನು ಮಂಜೂರು

ಆಗಸ್ಟ್ 9 ರಂದು ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಕರ್ತವ್ಯ ನಿರತ ಮಹಿಳಾ ಡಾಕ್ಟರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿಎಫ್ ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿರುವ ಆರೋಪ ಮಂಡಲ್ ಅವರದಾಗಿತ್ತು. ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪ ಘೋಷ್ ವಿರುದ್ಧ ಕೇಳಿಬಂದಿತ್ತು.

ಮಹಿಳಾ ಡಾಕ್ಟರ್ ರೇಪ್- ಕೊಲೆ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿ, ಆರ್ ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲಗೆ ಜಾಮೀನು ಮಂಜೂರು
ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್
Published On :

ಕೋಲ್ಕತ್ತಾ: ಕರ್ತವ್ಯನಿರತ ಡಾಕ್ಟರ್ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಮಾಜಿ ಪೊಲೀಸ್ ಅಧಿಕಾರಿ ಅಭಿಜಿತ್ ಮಂಡಲ್ ಹಾಗೂ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲರಾದ ಸಂದೀಪ್ ಘೋಷ್ ಅವರಿಗೆ ಸೀಲ್ದಾ ನ್ಯಾಯಾಲಯ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ಆಗಸ್ಟ್ 9 ರಂದು ಆರ್ ಜಿ ಕರ್ ಆಸ್ಪತ್ರೆಯಲ್ಲಿ ನಡೆದಿದ್ದ ಕರ್ತವ್ಯ ನಿರತ ಮಹಿಳಾ ಡಾಕ್ಟರ್ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿಎಫ್ ಐಆರ್ ದಾಖಲಿಸುವಲ್ಲಿ ವಿಳಂಬ ಮಾಡಿರುವ ಆರೋಪ ಮಂದಲ್ ಅವರದಾಗಿತ್ತು. ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪ ಘೋಷ್ ವಿರುದ್ಧ ಕೇಳಿಬಂದಿತ್ತು.

ಕೋಲ್ಕತ್ತಾ ಹೈಕೋರ್ಟ್ ಆದೇಶದ ಮೇರೆಗೆ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಇಬ್ಬರನ್ನು ಬಂಧಿಸಿತ್ತು. 90 ದಿನಗಳೊಳಗೆ ಆರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೆ ಸೀಲ್ದಾ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ಜಾಮೀನು ಮಂಜೂರು ಮಾಡಿದ್ದಾರ ಎಂದು ಘೋಷ್ ಪರ ವಕೀಲರು ತಿಳಿಸಿದರು.

ನ್ಯಾಯಾಂಗ ಬಂಧನದಲ್ಲಿರುವ ಘೋಷ್, ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದರೂ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಹಣಕಾಸು ಅವ್ಯವಹಾರ ಆರೋಪದ ಮತ್ತೊಂದು ಪ್ರಕರಣದಲ್ಲಿ ಜೈಲಿನಲ್ಲಿಯೇ ಇರಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.