ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ!
73 ವರ್ಷದ ಅಮೆರಿಕನ್ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
73 ವರ್ಷದ ಅಮೆರಿಕನ್ ಸಂಗೀತಗಾರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಅವರನ್ನು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದರು.
ಉಸ್ತಾದ್ ಜಾಕಿರ್ ಹುಸೇನ್ ಅವರ ತಂದೆ ಅಲ್ಲಾ ರಖಾ ಕೂಡ ಪ್ರಸಿದ್ಧ ತಬಲಾ ವಾದಕರಾಗಿದ್ದರು. ಪ್ರಸಿದ್ಧ ತಬಲಾ ವಾದಕ ಜಾಕೀರ್ ಹುಸೇನ್ ಅವರು ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಮುಂತಾದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅಷ್ಟೇ ಅಲ್ಲ, ಆಲ್-ಸ್ಟಾರ್ ಗ್ಲೋಬಲ್ ಕನ್ಸರ್ಟ್‌ನಲ್ಲಿ ಭಾಗವಹಿಸಲು ಮಾಜಿ ಅಧ್ಯಕ್ಷ ಬರಾಕ್ ಒಬಾಮರಿಂದ ಆಹ್ವಾನ ಪಡೆದ ಮೊದಲ ಭಾರತೀಯ ತಬಲಾ ವಾದಕ ಜಾಕಿರ್ ಹುಸೇನ್ ಆಗಿದ್ದಾರೆ.
ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ 1951ರಲ್ಲಿ ಜನಿಸಿದ ಜಾಕೀರ್ ಹುಸೇನ್ ಕೇವಲ 3 ವರ್ಷ ವಯಸ್ಸಿನಲ್ಲೇ ತಬಲಾವನ್ನು ಅಭ್ಯಾಸ ಮಾಡಲು ಪ್ರಾರಂಭಿಸಿದರು. ಅಷ್ಟೇ ಅಲ್ಲ, 7ನೇ ವಯಸ್ಸಿಗೆ ಪರಿಣತೆ ಪಡೆದಿದ್ದು 11ನೇ ವಯಸ್ಸಿನಲ್ಲಿ ಜಾಕಿರ್ ಹುಸೇನ್ ವಿವಿಧ ಸ್ಥಳಗಳಲ್ಲಿ ತಮ್ಮ ಕಾರ್ಯಕ್ರಮಗಳನ್ನು ನೀಡಲು ಪ್ರಾರಂಭಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



