ಸೋನಿಯಾ ಗಾಂಧಿ ಆಪ್ತ ಸಹಾಯಕ ಪಿ.ಪಿ ಮಾಧವನ್ ನಿಧನ: ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ
ಮಾಧವನ್ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರೊಂದಿಗೆ (ರಾಜೀವ್ ಗಾಂಧಿ & ಸೋನಿಯಾ ಗಾಂಧಿ) ಉತ್ತಮ ಬಾಂಧವ್ಯ ಹೊಂದಿದ್ದರು.

ಕೇರಳ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ದೀರ್ಘಕಾಲದ ಆಪ್ತ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಪಿ.ಪಿ. ಮಾಧವನ್ ನಿಧನರಾಗಿದ್ದಾರೆ.
ಮಾಧವನ್ ಡಿಸೆಂಬರ್ 16 ರಂದು ತಮ್ಮ 73 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಸೇರಿದಂತೆ ಪಕ್ಷದ ನಾಯಕರು ಪಿ.ಪಿ. ಮಾಧವನ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಮಾಧವನ್ ಅವರು ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪಕ್ಷಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ನಮ್ಮ ಪಕ್ಷದ ವರಿಷ್ಠರೊಂದಿಗೆ (ರಾಜೀವ್ ಗಾಂಧಿ & ಸೋನಿಯಾ ಗಾಂಧಿ) ಉತ್ತಮ ಬಾಂಧವ್ಯ ಹೊಂದಿದ್ದರು. ಮಾಧವನ್ ಅವರ ಹಠಾತ್ ನಿಧನ ಕುಟುಂಬ ಮತ್ತು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮಾಧವನ್ ಜಿ ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಕೆ.ಸಿ.ವೇಣುಗೋಪಾಲ್ ಸಂತಾಪ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



