ದೇಶ

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ: ನಿತೀಶ್, ನಾಯ್ಡು ಮೌನ ಪ್ರಶ್ನಿಸಿದ ಕೇಜ್ರಿವಾಲ್

X ನಲ್ಲಿ ಪತ್ರವನ್ನು ಹಂಚಿಕೊಂಡಿರುವ ಕೇಜ್ರಿವಾಲ್, ಅಂಬೇಡ್ಕರ್ ಅವರನ್ನು ಪ್ರೀತಿಸುವವರು ಭಾರತದ ಸಂವಿಧಾನದ ಶಿಲ್ಪಿಯನ್ನು "ಅವಮಾನಿಸಿದ" ಬಿಜೆಪಿಯನ್ನು ಬೆಂಬಲಿಸಲು ಸಾಧ್ಯವಿಲ್ಲ.

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ: ನಿತೀಶ್, ನಾಯ್ಡು ಮೌನ ಪ್ರಶ್ನಿಸಿದ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Published On :

ನವದೆಹಲಿ: ಎನ್‌ಡಿಎ ಮಿತ್ರ ಪಕ್ಷಗಳಾದ ಜೆಡಿಯು ಮತ್ತು ಟಿಡಿಪಿಯ ನಾಯಕರಾದ ನಿತೀಶ್ ಕುಮಾರ್ ಹಾಗೂ ಚಂದ್ರಬಾಬು ನಾಯ್ಡು ಅವರಿಗೆ ಗುರುವಾರ ಪತ್ರ ಬರೆದಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು, ಬಿಆರ್ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಸುವಂತೆ ಒತ್ತಾಯಿಸಿದ್ದಾರೆ.

X ನಲ್ಲಿ ಪತ್ರವನ್ನು ಹಂಚಿಕೊಂಡಿರುವ ಕೇಜ್ರಿವಾಲ್, ಅಂಬೇಡ್ಕರ್ ಅವರನ್ನು ಪ್ರೀತಿಸುವವರು ಭಾರತದ ಸಂವಿಧಾನದ ಶಿಲ್ಪಿಯನ್ನು "ಅವಮಾನಿಸಿದ" ಬಿಜೆಪಿಯನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಜನ ಭಾವಿಸುತ್ತಾರೆ ಮತ್ತು ಇದರ ಬಗ್ಗೆ ಯೋಚಿಸುವಂತೆ ನಿತೀಶ್ ಕುಮಾರ್ ಮತ್ತು ನಾಯ್ಡುಗೆ ಕೇಳಿಕೊಂಡಿದ್ದಾರೆ.

ಬಾಬಾಸಾಹೇಬ್ ಬಗ್ಗೆ ಅಮಿತ್ ಶಾ ಅವರ ಹೇಳಿಕೆಯು "ಅಗೌರವ" ಮಾತ್ರವಲ್ಲದೆ ಸಂವಿಧಾನದ ಬಗ್ಗೆ ಬಿಜೆಪಿಯ ದೃಷ್ಟಿಕೋನವನ್ನು ಬಹಿರಂಗಪಡಿಸಿದೆ ಎಂದು ಎಎಪಿ ನಾಯಕರು ಇಬ್ಬರು ಮುಖ್ಯಮಂತ್ರಿಗಳಿಗೆ ಬರೆದ ಪತ್ರಗಳಲ್ಲಿ ತಿಳಿಸಿದ್ದಾರೆ.

"ಬಾಬಾಸಾಹೇಬ್ ಬಗ್ಗೆ ಸಂಸತ್ತಿನಲ್ಲಿ ಶಾ ನೀಡಿದ ಹೇಳಿಕೆ ಇಡೀ ದೇಶವನ್ನು ದಂಗುಬಡಿಸುವಂತೆ ಮಾಡಿದೆ. 'ಅಂಬೇಡ್ಕರ್-ಅಂಬೇಡ್ಕರ್ ಎಂದು ಜಪ ಮಾಡುವುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ' ಎಂಬ ಅವರ ಹೇಳಿಕೆ ಅಗೌರವ ಮಾತ್ರವಲ್ಲ, ಬಾಬಾಸಾಹೇಬ್ ಮತ್ತು ನಮ್ಮ ಸಂವಿಧಾನದ ಬಗ್ಗೆ ಬಿಜೆಪಿಯ ದೃಷ್ಟಿಕೋನವನ್ನು ಬಹಿರಂಗಪಡಿಸುತ್ತದೆ" ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ(ಎನ್‌ಡಿಎ) ಸರ್ಕಾರದ ಭಾಗವಾಗಿವೆ.

"ಸಂವಿಧಾನದ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ವಿರುದ್ಧ ಇಂತಹ ಹೇಳಿಕೆ ನೀಡಲು ಬಿಜೆಪಿಗೆ ಹೇಗೆ ಧೈರ್ಯ ಬಂತು? ಇದು ದೇಶಾದ್ಯಂತ ಲಕ್ಷಾಂತರ ಜನರ ಭಾವನೆಗಳನ್ನು ಘಾಸಿಗೊಳಿಸಿದೆ" ಎಂದು ಕೇಜ್ರಿವಾಲ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.