ದೇಶ

ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತ!

ರಾಜ್ಯಸಭೆಯ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಅವಿಶ್ವಾಸ ನಿರ್ಣಯವನ್ನು ತರಲು ಕನಿಷ್ಠ 14 ದಿನಗಳ ಮುಂಚಿತವಾಗಿ ನೋಟಿಸ್ ನೀಡುವುದು ಮುಖ್ಯ. ಆದರೆ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 20ರಂದು ಅಂದರೆ ನಾಳೆ ಕೊನೆಗೊಳ್ಳುತ್ತಿದೆ.

ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತ!
ಜಗದೀಪ್ ಧಂಖರ್ — PTI
Published On :

ನವದೆಹಲಿ: ಉಪಾಧ್ಯಕ್ಷ ಜಗದೀಪ್ ಧಂಖರ್ ಪದಚ್ಯುತಿಗೆ ಆಗ್ರಹಿಸಿ ಪ್ರತಿಪಕ್ಷಗಳು ನೀಡಿದ್ದ ಅವಿಶ್ವಾಸ ನಿರ್ಣಯದ ನೋಟಿಸ್ ತಿರಸ್ಕೃತಗೊಂಡಿದೆ. ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿ ಪಿ.ಸಿ ಮೋದಿ ಅವರು ಸದನದಲ್ಲಿ ಮಂಡಿಸಿದ ನಿರ್ಧಾರದಲ್ಲಿ, ಮಹಾಭಿಯೋಗ ನೋಟಿಸ್ ದೇಶದ ಸಾಂವಿಧಾನಿಕ ಸಂಸ್ಥೆಗಳನ್ನು ದೂಷಿಸುವ ಮತ್ತು ಪ್ರಸ್ತುತ ಉಪರಾಷ್ಟ್ರಪತಿಯ ಮಾನಹಾನಿ ಮಾಡುವ ಷಡ್ಯಂತ್ರದ ಭಾಗವಾಗಿದೆ ಎಂದು ಉಪಸಭಾಪತಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಸಭೆಯಲ್ಲಿ ವಿಪಕ್ಷಗಳು ಸಭಾಪತಿ ಜಗದೀಪ್ ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ನೋಟಿಸ್ ನೀಡಿದ್ದರು. ಧಂಖರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು 67ಬಿ ವಿಧಿ ಅಡಿಯಲ್ಲಿ ವಿರೋಧ ಪಕ್ಷಗಳು ನೋಟಿಸ್ ನೀಡಿದ್ದು, ಈ ನೋಟಿಸ್ ಅನ್ನು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಅವರಿಗೆ ಹಸ್ತಾಂತರಿಸಲಾಗಿತ್ತು. ರಾಜ್ಯಸಭೆಯ ಅಧ್ಯಕ್ಷರನ್ನು ಪದಚ್ಯುತಗೊಳಿಸಲು ಅವಿಶ್ವಾಸ ನಿರ್ಣಯವನ್ನು ತರಲು ಕನಿಷ್ಠ 14 ದಿನಗಳ ಮುಂಚಿತವಾಗಿ ನೋಟಿಸ್ ನೀಡುವುದು ಮುಖ್ಯ. ಆದರೆ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 20ರಂದು ಅಂದರೆ ನಾಳೆ ಕೊನೆಗೊಳ್ಳುತ್ತಿದ್ದು ಆರು ದಿನಗಳ ಹಿಂದಷ್ಟೇ ಅವಿಶ್ವಾಸ ನಿರ್ಣಯದ ನೋಟಿಸ್ ಸಲ್ಲಿಸಿತ್ತು.

ವಾಸ್ತವವಾಗಿ, ಪ್ರತಿಪಕ್ಷಗಳು ಧಂಖರ್ ಅವರು ಸದನದಲ್ಲಿ ಪಕ್ಷಪಾತದ ವರ್ತನೆಯನ್ನು ಆರೋಪಿಸಿದ್ದರು. ಅಲ್ಲದೆ, ಈ ನೋಟಿಸ್‌ಗೆ ಪ್ರತಿಪಕ್ಷದ 60 ಸಂಸದರು ಸಹಿ ಹಾಕಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.