ದೇಶ

ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಅಮಿತ್ ಶಾ ವಿರುದ್ಧ ಮಾಯಾವತಿ ವಾಗ್ದಾಳಿ

ಒಂದು ವೇಳೆ ಅಮಿತ್ ಶಾ ಕ್ಷಮೆಯಾಚಿಸದಿದ್ದರೆ ಡಿಸೆಂಬರ್ 24 ರಂದು ಬಿಎಸ್ಪಿ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ: ಅಮಿತ್ ಶಾ ವಿರುದ್ಧ ಮಾಯಾವತಿ ವಾಗ್ದಾಳಿ
ಮಾಯಾವತಿ
Published On :

ಲಖನೌ: ಬಹುಜನ ಸಮಾಜ ಪಕ್ಷದ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಅವರು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಬಿಆರ್ ಅಂಬೇಡ್ಕರ್ ಕುರಿತು ಅವರು ನೀಡಿದ ಹೇಳಿಕೆಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಅಮಿತ್ ಶಾ ಕ್ಷಮೆಯಾಚಿಸದಿದ್ದರೆ ಡಿಸೆಂಬರ್ 24 ರಂದು ಬಿಎಸ್ಪಿ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಉತ್ತರ ಪ್ರದೇಶ ಮಾಜಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

ಹಿಂದಿಯಲ್ಲಿ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿರುವ ಮಾಯಾವತಿ, "ದಲಿತರ, ವಂಚಿತ ಹಾಗೂ ಇತರ ನಿರ್ಲಕ್ಷಿತ ಜನರ ಸ್ವಾಭಿಮಾನ, ಮತ್ತು ಮಾನವ ಹಕ್ಕುಗಳಿಗಾಗಿ ಅತಿಮಾನವೀಯ ಮತ್ತು ಕಲ್ಯಾಣ ಸಂವಿಧಾನದ ರೂಪದಲ್ಲಿ ಮೂಲ ಗ್ರಂಥವನ್ನು ರಚಿಸಿದ ಬಾಬಾಸಾಹೇಬ್ ಡಾ ಭೀಮರಾವ್ ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ನೀಡಿದ ಹೇಳಿಕೆಯಿಂದ ದೇಶದ ಜನರ ಹೃದಯಕ್ಕೆ ಘಾಸಿ ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಅಂತಹ ಮಹಾನ್ ವ್ಯಕ್ತಿಯ ಬಗ್ಗೆ ಅಮಿತ್ ಶಾ ಸಂಸತ್ತಿನಲ್ಲಿ ನೀಡಿದ ಹೇಳಿಕೆಯಿಂದ ಸಮಾಜದ ಎಲ್ಲಾ ವರ್ಗಗಳ ಜನರು ಆಕ್ರೋಶಗೊಂಡಿದ್ದಾರೆ. ಹೀಗಾಗಿ ಕೇಂದ್ರ ಗೃಹ ಸಚಿವರು ತಕ್ಷಣ ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಮತ್ತು ಕ್ಷಮೆ ಕೇಳಬೇಕು ಎಂದು ಮಾಯಾವತಿ ಒತ್ತಾಯಿಸಿದ್ದಾರೆ.

ಅಮಿತ್ ಶಾ ಕ್ಷಮೆ ಕೇಳದಿದ್ದರೆ ಬಿಎಸ್‌ಪಿ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಬಿಎಸ್‌ಪಿ ಮುಖ್ಯಸ್ಥರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.