ದೇಶ

ಅಂಬೇಡ್ಕರ್ ವಿವಾದದ ನಡುವೆ ದಲಿತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿದ ಹೇಳಿಕೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವುದರ ನಡುವೆ ಕೇಜ್ರಿವಾಲ್ ಈ ಯೋಜನೆ ಘೋಷಿಸಿದ್ದಾರೆ.

ಅಂಬೇಡ್ಕರ್ ವಿವಾದದ ನಡುವೆ ದಲಿತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
ದಲಿತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್
Published On :

ನವದೆಹಲಿ: ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ದಲಿತ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶದಿಂದ ಡಾ. ಅಂಬೇಡ್ಕರ್ ಸಮ್ಮಾನ್ ವಿದ್ಯಾರ್ಥಿವೇತನ ಯೋಜನೆ ಘೋಷಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಡಾ ಬಿಆರ್ ಅಂಬೇಡ್ಕರ್ ಬಗ್ಗೆ ನೀಡಿದ ಹೇಳಿಕೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವುದರ ನಡುವೆ ಕೇಜ್ರಿವಾಲ್ ಈ ಯೋಜನೆ ಘೋಷಿಸಿದ್ದಾರೆ.

ದಲಿತ ಐಕಾನ್ ಅನ್ನು "ಅವಮಾನಿಸಿ" ಅಮಿತ್ ಶಾ ನೀಡಿದ್ದ ಹೇಳಿಕೆಗೆ ಈ ವಿದ್ಯಾರ್ಥಿವೇತನವು ಪ್ರತಿಕ್ರಿಯೆಯಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಯೋಜನೆಯನ್ನು ಅನಾವರಣಗೊಳಿಸಿ ಮಾತನಾಡಿದ ಕೇಜ್ರಿವಾಲ್, ಫೆಬ್ರವರಿ 2025 ರ ಚುನಾವಣೆಯಲ್ಲಿ AAP ಗೆಲುವು ಸಾಧಿಸಿದರೆ, ದೆಹಲಿ ಸರ್ಕಾರವು ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶ ಪಡೆಯುವ ದಲಿತ ವಿದ್ಯಾರ್ಥಿಗಳಿಗೆ ಧನಸಹಾಯ ನೀಡಲಾಗುವುದು ಎಂದು ಭರವಸೆ ನೀಡಿದರು.

ದೆಹಲಿಯ ಯಾವುದೇ ದಲಿತ ವಿದ್ಯಾರ್ಥಿಗಳು ಹಣದ ಕೊರತೆಯಿಂದಾಗಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ತಮ್ಮ ಅಧ್ಯಯನವನ್ನು ನಿಲ್ಲಿಸಬೇಕಾಗಿಲ್ಲ. ಅವರಿಗೆ ಅಂಬೇಡ್ಕರ್ ಸಮ್ಮಾನ್ ಸ್ಕಾಲರ್‌ಶಿಪ್ ಯೋಜನೆ ಅಡಿ ಧನಸಹಾಯ ಮಾಡಲಾಗುವುದು ಎಂದರು.

ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ನೀಡಿದ ಹೇಳಿಕೆಗೆ ತೀವ್ರ ಅಸಮ್ಮತಿ ವ್ಯಕ್ತಪಡಿಸಿದ ಕೇಜ್ರಿವಾಲ್, ಶಾ ದಲಿತರ ಐಕಾನ್ ಅನ್ನು ಅಪಹಾಸ್ಯ ಮಾಡಿದ್ದಾರೆ. ಅಮಿತ್ ಶಾ ಹೇಳಿಕೆಯಿಂದ ಲಕ್ಷಾಂತರ ಅಂಬೇಡ್ಕರ್ ಅನುಯಾಯಿಗಳಿಗೆ ನೋವುಂಟು ಮಾಡಿದೆ ದೆಹಲಿ ಮಾಜಿ ಸಿಎಂ ವಾಗ್ದಾಳಿ ನಡೆಸಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.