ದೇಶ

ಆರ್ಥಿಕ ಸಮೀಕ್ಷ ಕುರಿತ ಹೇಳಿಕೆ: ರಾಹುಲ್ ಗಾಂಧಿ ಬರೇಲಿ ನ್ಯಾಯಾಲಯದ ಸಮನ್ಸ್

ಅಖಿಲ ಭಾರತ ಹಿಂದೂ ಮಹಾಸಂಘದ ಮಂಡಲ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸಮನ್ಸ್ ನೀಡಿದೆ

ಆರ್ಥಿಕ ಸಮೀಕ್ಷ ಕುರಿತ ಹೇಳಿಕೆ: ರಾಹುಲ್ ಗಾಂಧಿ ಬರೇಲಿ ನ್ಯಾಯಾಲಯದ ಸಮನ್ಸ್
ರಾಹುಲ್ ಗಾಂಧಿ
Published On :

ಬರೇಲಿ: ಲೋಕಸಭಾ ಚುನಾವಣೆ ವೇಳೆಯಲ್ಲಿ ಆರ್ಥಿಕ ಸಮೀಕೆ ಕುರಿತು ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ಜನವರಿ 7ಕ್ಕೂ ಮುನ್ನಾ ವಿಚಾರಣೆಗೆ ಹಾಜರಾಗುವಂತೆ ಉತ್ತರ ಪ್ರದೇಶದ ಬರೇಲಿಯ ನ್ಯಾಯಾಲಯವೊಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಸುಧೀರ್ ಕುಮಾರ್ ಶನಿವಾರ ನೋಟಿಸ್ ಜಾರಿ ಮಾಡಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಂಘದ ಮಂಡಲ ಅಧ್ಯಕ್ಷ ಪಂಕಜ್ ಪಾಠಕ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸಮನ್ಸ್ ನೀಡಿದೆ.

ಮೊದಲಿಗೆ ಆಗಸ್ಟ್ ನಲ್ಲಿ ಪಾಠಕ್ ಶಾಸಕರು ಮತ್ತು ಸಂಸದರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ರಾಹುಲ್ ವಿರುದ್ಧ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ನಿರಾಕರಿಸಿದ ಹಿನ್ನೆಲೆಯಲ್ಲಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು.

ದೇಶದಲ್ಲಿ ದುರ್ಬಲ ವರ್ಗದವರೇ ಅತಿ ಹೆಚ್ಚಿನ ಪ್ರಮಾಣದಲ್ಲಿದ್ದರೂ ಅವರು ಹೊಂದಿರುವ ಆಸ್ತಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಇದು ಹೀಗೆ ಮುಂದುವರೆದರೆ ಅತಿ ಹೆಚ್ಚು ಜನಸಂಖ್ಯೆ ಇರುವ ಜನ ಹೆಚ್ಚಿನ ಆಸ್ತಿಗೆ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳುವ ಮೂಲಕ ದುರ್ಬಲ ವರ್ಗದವರಲ್ಲಿ ದ್ವೇಷ ಮತ್ತು ಶತ್ರುತ್ವದ ವಿಷ ಬೀಜ ಬಿತ್ತಲು ರಾಹುಲ್ ಗಾಂಧಿ ಯತ್ನಿಸಿದ್ದಾರೆ ಎಂದು ಪಾಠಕ್ ಪರ ವಕೀಲ ವೀರೇಂದ್ರ ಪಾಲ್ ಗುಪ್ತಾ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.