ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಪ್ರತಿಭಟನಾ ನಿರತ ರೈತರೊಂದಿಗೆ ಮಾತನಾಡಲಿ: ಪಂಜಾಬ್ ಸಿಎಂ ಭಗವಂತ್ ಮಾನ್
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

ಚಂಡೀಗಢ: ಕೇಂದ್ರ ಸರ್ಕಾರ ಮೊಂಡುತನ ಬಿಟ್ಟು ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಮಂಗಳವಾರ ಆಗ್ರಹಿಸಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ(ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ನೇತೃತ್ವದಲ್ಲಿ ರೈತರು ಕಳೆದ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.
ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ಪಂಜಾಬ್‌ನ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ನವೆಂಬರ್ 26 ರಿಂದ ಖಾನೌರಿ ಗಡಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಅವರ ಉಪವಾಸವು ಭಾನುವಾರ 27ನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯರು ಅವರ ಆರೋಗ್ಯ ಸ್ಥಿತಿ "ಚಿಂತಾಜನಕ"ವಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ತನ್ನ ಮೊಂಡುತನವನ್ನು ಬಿಟ್ಟು ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಎಕ್ಸ್‌ನಲ್ಲಿ ಪಂಜಾಬ್ ಸಿಎಂ ಪೋಸ್ಟ್ ಮಾಡಿದ್ದಾರೆ.
"ಮೋದಿ ಜಿಯಿಂದ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ನಿಲ್ಲಿಸಲು ಸಾಧ್ಯವಾಗುವುದಾದರೆ ದೆಹಲಿಯಿಂದ 200 ಕಿಲೋಮೀಟರ್ ದೂರದಲ್ಲಿ ಕುಳಿತಿರುವ ರೈತರೊಂದಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲವೇ? ನೀವು ಯಾವ ಸಮಯಕ್ಕಾಗಿ ಕಾಯುತ್ತಿದ್ದೀರಿ?" ಎಂದು ಮಾನ್ ಪ್ರಶ್ನಿಸಿದ್ದಾರೆ.
ಇದು ಕೇಂದ್ರ ಸರ್ಕಾರದ ಕರ್ತವ್ಯವಾಗಿದ್ದು, ಯಾವುದೇ ಸಮಸ್ಯೆ ಇದ್ದರೂ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಪಂಜಾಬ್ ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



