ದೇಶ

ಒಡಿಶಾ ಗವರ್ನರ್ ಹುದ್ದೆಗೆ ರಘುಬರ್ ದಾಸ್ ರಾಜೀನಾಮೆ; ಮತ್ತೆ ಸಕ್ರಿಯ ರಾಜಕಾರಣಕ್ಕೆ ಸಜ್ಜು

ಇತ್ತೀಚೆಗೆ ನಡೆದ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ದಾಸ್ ಅವರ ಹಳೆಯ ಕ್ಷೇತ್ರವಾದ ಜಮ್ಶೆಡ್‌ಪುರ ಪೂರ್ವದಿಂದ ಸ್ಪರ್ಧಿಸಬಹುದು ಎಂದು ನಂಬಲಾಗಿತ್ತು.

ಒಡಿಶಾ ಗವರ್ನರ್ ಹುದ್ದೆಗೆ ರಘುಬರ್ ದಾಸ್ ರಾಜೀನಾಮೆ; ಮತ್ತೆ ಸಕ್ರಿಯ ರಾಜಕಾರಣಕ್ಕೆ ಸಜ್ಜು
ರಘುಬರ್ ದಾಸ್
Published On :

ರಾಂಚಿ: ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಲು ಸಿದ್ಧರಾಗಿದ್ದಾರೆ.

ಇದಕ್ಕೂ ಮೊದಲು ಸೆಪ್ಟೆಂಬರ್ 11 ರಂದು, ಒಡಿಶಾ ಗವರ್ನರ್ ರಘುಬರ್ ದಾಸ್ ಅವರು ಎಕ್ಸ್ ಮತ್ತು ಫೇಸ್‌ಬುಕ್‌ನಲ್ಲಿ ತಮ್ಮ ಪ್ರೊಫೈಲ್ ಚಿತ್ರದ ಬಣ್ಣವನ್ನು ಬದಲಾಯಿಸಿದ್ದರು. ಇದು ಅವರು ಮತ್ತೆ ಜಾರ್ಖಂಡ್ ರಾಜಕೀಯಕ್ಕೆ ಮರಳುತ್ತಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿತ್ತು. ಇದೀಗ ರಾಜ್ಯಪಾಲ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಇತ್ತೀಚೆಗೆ ನಡೆದ ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ದಾಸ್ ಅವರ ಹಳೆಯ ಕ್ಷೇತ್ರವಾದ ಜಮ್ಶೆಡ್‌ಪುರ ಪೂರ್ವದಿಂದ ಸ್ಪರ್ಧಿಸಬಹುದು ಎಂದು ಹೆಚ್ಚಾಗಿ ನಂಬಲಾಗಿತ್ತು. ಆದರೆ ಕೆಲವು ಕಾರಣಗಳಿಂದ ಈ ಆಲೋಚನೆಯನ್ನು ಮುಂದೂಡಲಾಯಿತು ಮತ್ತು ಅವರ ಸೊಸೆಯನ್ನು ಅಲ್ಲಿಂದ ಕಣಕ್ಕೆ ಇಳಿಸಲಾಯಿತು.

ರಾಷ್ಟ್ರಪತಿ ಭವನದ ಪತ್ರಿಕಾ ಪ್ರಕಟಣೆಯ ಪ್ರಕಾರ, ಭಾರತದ ರಾಷ್ಟ್ರಪತಿಗಳು ರಘುಬರ್ ದಾಸ್ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ್ದಾರೆ. ಪ್ರಸ್ತುತ ಮಿಜೋರಾಂ ರಾಜ್ಯಪಾಲರಾಗಿರುವ ಡಾ.ಹರಿ ಬಾಬು ಕಂಬಂಪತಿ ಅವರನ್ನು ಒಡಿಶಾ ನೂತನ ರಾಜ್ಯಪಾಲರಾಗಿ ನೇಮಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.