ದೇಶ

Anna University: ಕ್ಯಾಂಪಸ್ ನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, FIR ದಾಖಲು

ಯುವತಿ ಹಾಗೂ ಆಕೆಯ ಸ್ನೇಹಿತ ಕ್ಯಾಂಪಸ್‌ನಲ್ಲಿ ಒಟ್ಟಿಗೆ ಕುಳಿತಿದ್ದಾಗ ಈ ಘಟನೆ ಸಂಭವಿಸಿದೆ.

Anna University: ಕ್ಯಾಂಪಸ್ ನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, FIR ದಾಖಲು
ಅಣ್ಣಾ ವಿಶ್ವವಿದ್ಯಾನಿಲಯ
Published On :

ಚೆನ್ನೈ: ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದ (Anna University) ಕ್ಯಾಂಪಸ್ ನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಬುಧವಾರ ಬೆಳಗ್ಗ ಅತ್ಯಾಚಾರವೆಸಗಿದ್ದಾರೆ. ಈ ಸಂಬಂಧ ಕೋತ್ತೂರ್‌ಪುರಂ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 64 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮಧ್ಯರಾತ್ರಿ ಸಮೀಪದ ಚರ್ಚ್‌ನಲ್ಲಿ ಕ್ರಿಸ್‌ಮಸ್ ಪ್ರಾರ್ಥನೆ ಮುಗಿಸಿ ಹಿಂದಿರುಗಿದ ನಂತರ ಯುವತಿ ಹಾಗೂ ಆಕೆಯ ಸ್ನೇಹಿತ ಕ್ಯಾಂಪಸ್‌ನಲ್ಲಿ ಒಟ್ಟಿಗೆ ಕುಳಿತಿದ್ದಾಗ ಈ ಘಟನೆ ಸಂಭವಿಸಿದೆ. ಆರೋಪಿಗಳು ಪುರುಷ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ನಂತರ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಘಟನೆ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಪ್ರತಿಕ್ರಿಯಿಸಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

"ಡಿಎಂಕೆ ಸರ್ಕಾರದಡಿ ತಮಿಳುನಾಡು ಕಾನೂನುಬಾಹಿರ ಚಟುವಟಿಕೆಗಳ ತಾಣವಾಗಿದೆ ಮತ್ತು ಅಪರಾಧಿಗಳ ಆಶ್ರಯ ತಾಣವಾಗಿದೆ. ಇನ್ನು ಮುಂದೆ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷಿತ ಭಾವನೆ ಇಲ್ಲ, ಏಕೆಂದರೆ ರಾಜ್ಯ ಸರ್ಕಾರ ಪೊಲೀಸರನ್ನು ಬಳಸಿಕೊಂಡು ಪ್ರತಿಪಕ್ಷಗಳನ್ನು ಮೌನಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.