ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಒತ್ತಾಯ
ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನಡೆಯಲಿರುವ ಸ್ಥಳ ದೇಶದ ಹೆಮ್ಮೆಯ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ.

ನವದೆಹಲಿ: ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಸುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಒತ್ತಾಯಿಸಿದ್ದಾರೆ.
ಎರಡು ಅವಧಿಗೆ ದೇಶದ ಪ್ರಧಾನಿಯಾಗಿದ್ದ ಸಿಂಗ್ ಅವರ ಸ್ಮಾರಕ ಸ್ಥಾಪಿಸುವ ಕುರಿತು ಮೋದಿ ಮಾತನಾಡಿದ ಬಳಿಕ ಅವರಿಗೆ ಪತ್ರ ಬರೆದಿರುವ ಖರ್ಗೆ, ನಾಳೆ ಮನಮೋಹನ್ ಸಿಂಗ್ ಅಂತ್ಯಸಂಸ್ಕಾರ ನಡೆಯಲಿರುವ ಸ್ಥಳ ದೇಶದ ಹೆಮ್ಮೆಯ ಪುತ್ರನ ಸ್ಮಾರಕದ ಪವಿತ್ರ ಸ್ಥಳವಾಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಇಂದು ಬೆಳಗ್ಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿರುವುದಾಗಿ ತಿಳಿಸಿದ್ದಾರೆ.
ರಾಷ್ಟ್ರನಾಯಕರು ಮತ್ತು ಮಾಜಿ ಪ್ರಧಾನಿಗಳ ಅಂತ್ಯಕ್ರಿಯೆಯ ಸ್ಥಳದಲ್ಲಿಯೇ ಸ್ಮಾರಕ ನಿರ್ಮಿಸುವ ಸಂಪ್ರದಾಯವಿದೆ. ಅದರಂತೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿಯೇ ಮನಮೋಹನ್ ಸಿಂಗ್ ಅಂತ್ಯ ಸಂಸ್ಕಾರ ನಡೆಯಬೇಕು ಎಂದು ಖರ್ಗೆ ಮನವಿ ಮಾಡಿದ್ದಾರೆ.
ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿ, ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಸೇರಿದಂತೆ ಇತರ ಅನೇಕ ಕೆಲಸಗಳನ್ನು ನಿಬಾಯಿಸಿ ದೇಶದ ಆರ್ಥಿಕ ಮತ್ತು ಹಣಕಾಸಿನ ವಿಷಯಗಳ ಅಪಾರ ಪಾಂಡಿತ್ಯ ಹೊಂದಿದ್ದ ಡಾ. ಮನ್ ಮೋಹನ್ ಸಿಂಗ್ ಅವರ ಬಗ್ಗೆ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಸೇರಿದಂತೆ ಹಲವು ವಿಶ್ವ ನಾಯಕರು ಗೌರವಿಸುತ್ತಿದ್ದರು ಎಂದಿದ್ದಾರೆ.
ಜಾಗತಿಕ ಆರ್ಥಿಕ ಆರ್ಥಿಕ ಬಿಕ್ಕಟ್ಟನ್ನು ತಗ್ಗಿಸುವಲ್ಲಿ ಸಿಂಗ್ ಅವರ ಸಲಹೆ, ನಾಯಕತ್ವ ಮತ್ತು ಕೊಡುಗೆ ಪ್ರಮುಖವಾದದ್ದು, ರಾಷ್ಟ್ರ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾಗ, ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಅವರೊಂದಿಗೆ ಡಾ. ಮನಮೋಹನ್ ಸಿಂಗ್ ಅವರು ದೇಶವನ್ನು ಬಿಕ್ಕಟ್ಟಿನಿಂದ ಹೊರತೆಗೆದು ಆರ್ಥಿಕ ಸಮೃದ್ಧಿ ಮತ್ತು ಸ್ಥಿರತೆಯತ್ತ ಕೊಂಡೊಯ್ದಿದ್ದರು ಎಂದು ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ.
ಜಾಗತಿಕ ಆರ್ಥಿಕ ಆರ್ಥಿಕ ಬಿಕ್ಕಟ್ಟನ್ನು ತಗ್ಗಿಸುವಲ್ಲಿ ಸಿಂಗ್ ಅವರ ಸಲಹೆ, ನಾಯಕತ್ವ ಮತ್ತು ಕೊಡುಗೆ ಪ್ರಮುಖವಾದದ್ದು, ರಾಷ್ಟ್ರ ತೀವ್ರ ಆರ್ಥಿಕ ಬಿಕ್ಕಟ್ಟಿನಲ್ಲಿದ್ದಾಗ, ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಅವರೊಂದಿಗೆ ಡಾ. ಮನಮೋಹನ್ ಸಿಂಗ್ ಅವರು ದೇಶವನ್ನು ಬಿಕ್ಕಟ್ಟಿನಿಂದ ಹೊರತೆಗೆದು ಆರ್ಥಿಕ ಸಮೃದ್ಧಿ ಮತ್ತು ಸ್ಥಿರತೆಯತ್ತ ಕೊಂಡೊಯ್ದಿದ್ದರು ಎಂದು ಪತ್ರದಲ್ಲಿ ಖರ್ಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



