ದೇಶ

ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅರ್ಚಕರು, ಗ್ರಂಥಿಗಳಿಗೆ ತಿಂಗಳಿಗೆ ₹ 18,000: ಅರವಿಂದ ಕೇಜ್ರಿವಾಲ್

ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಎಎಪಿ ಪ್ರಯತ್ನ ನಡೆಸುತ್ತಿದೆ. ಹಲವು ವಿಶೇಷ ಯೋಜನೆಗಳನ್ನು ಘೋಷಿಸುತ್ತಿದೆ.

ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ಅರ್ಚಕರು, ಗ್ರಂಥಿಗಳಿಗೆ ತಿಂಗಳಿಗೆ ₹ 18,000: ಅರವಿಂದ ಕೇಜ್ರಿವಾಲ್
ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್
Published On :

ನವದೆಹಲಿ: ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ತಮ್ಮ ಪಕ್ಷವು 'ಪೂಜಾರಿ- ಗ್ರಂಥಿ ಸಮ್ಮಾನ್ ಯೋಜನೆ'ಯನ್ನು ಪ್ರಾರಂಭಿಸಲಿದೆ. ದೇವಾಲಯದ ಅರ್ಚಕರು ಮತ್ತು ಗುರುದ್ವಾರಗಳ ಗ್ರಂಥಿಗಳಿಗೆ ಮಾಸಿಕ 18,000 ರೂ. ಭತ್ಯೆ ನೀಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿಯ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದಾರೆ.

ಮುಂದಿನ ವರ್ಷ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಮುನ್ನ ಈ ಘೋಷಣೆ ಹೊರಬಿದ್ದಿದ್ದು, ಸತತ ನಾಲ್ಕನೇ ಅವಧಿಗೆ ಅಧಿಕಾರವನ್ನು ಉಳಿಸಿಕೊಳ್ಳಲು ಎಎಪಿ ಪ್ರಯತ್ನ ನಡೆಸುತ್ತಿದೆ. ಹಲವು ವಿಶೇಷ ಯೋಜನೆಗಳನ್ನು ಘೋಷಿಸುತ್ತಿದೆ.

'ಪೂಜಾರಿಗಳು ಮತ್ತು ಗ್ರಂಥಿಗಳು ನಮ್ಮ ಸಮಾಜದ ಪ್ರಮುಖ ಭಾಗವಾಗಿದ್ದಾರೆ. ಆದರೆ, ಅವರನ್ನು ನಿರ್ಲಕ್ಷ್ಯಿಸಲಾಗಿದೆ. ದೇಶದಲ್ಲಿ ಮೊದಲ ಬಾರಿಗೆ, ನಾವು ಅವರನ್ನು ಬೆಂಬಲಿಸಲು ಈ ಯೋಜನೆಯನ್ನು ಪರಿಚಯಿಸುತ್ತಿದ್ದೇವೆ. ಈ ಯೋಜನೆ ಅಡಿಯಲ್ಲಿ ಅವರಿಗೆ ತಿಂಗಳಿಗೆ 18,000 ರೂ. ಭತ್ಯೆಯನ್ನು ನೀಡಲಾಗುತ್ತದೆ. ಈ ಯೋಜನೆಗೆ ನಾಳೆಯಿಂದಲೇ ನೋಂದಣಿ ಪ್ರಾರಂಭವಾಗುತ್ತದೆ' ಎಂದು ಕೇಜ್ರಿವಾಲ್ ಹೇಳಿದರು.

ಮಂಗಳವಾರ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ಮಂದಿರಕ್ಕೆ ಭೇಟಿ ನೀಡಿ, ಅಲ್ಲಿನ ಅರ್ಚಕರ ನೋಂದಣಿ ಪ್ರಕ್ರಿಯೆಯ ಮೇಲ್ವಿಚಾರಣೆ ನಡೆಸುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.