ಜನವರಿ 9 ರಂದು ಮಿಜೋರಾಂ ರಾಜ್ಯಪಾಲರಾಗಿ ವಿಕೆ ಸಿಂಗ್ ಪ್ರಮಾಣ ವಚನ ಸ್ವೀಕಾರ
ವಿಕೆ ಸಿಂಗ್ ಅವರಿಗೆ ಗೌಹಾಟಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಗುವಾಹಟಿ: ಮಿಜೋರಾಂನ ನೂತನ ಗವರ್ನರ್ ಆಗಿ ಮಾಜಿ ಸೇನಾ ಮುಖ್ಯಸ್ಥ ಜನರಲ್ ವಿಜಯ್ ಕುಮಾರ್ ಸಿಂಗ್ ಅವರು ಜನವರಿ 9 ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಮಾರಂಭದಲ್ಲಿ ಮುಖ್ಯಮಂತ್ರಿ ಲಾಲ್ದುಹೋಮ, ಅವರ ಸಂಪುಟ ಸಹೋದ್ಯೋಗಿಗಳು, ವಿಧಾನಸಭಾ ಸ್ಪೀಕರ್ ಲಾಲ್ಬಿಯಾಕ್ಜಮಾ, ಉಪಸಭಾಪತಿ ಲಾಲ್ಫಾಮಕಿಮಾ, ಸಂಸದರು, ಪ್ರಮುಖ ಅಧಿಕಾರಿಗಳು ಮತ್ತು ವಿಶೇಷ ಆಹ್ವಾನಿತರು ಭಾಗವಹಿಸಲಿದ್ದಾರೆ.
ವಿಕೆ ಸಿಂಗ್ ಅವರಿಗೆ ಗೌಹಾಟಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಅಧಿಕಾರ ಮತ್ತು ಗೌಪ್ಯತೆಯ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ರಘುಬರ್ ದಾಸ್ ರಾಜೀನಾಮೆಯ ನಂತರ ಇತ್ತೀಚೆಗೆ ಒಡಿಶಾ ಗವರ್ನರ್ ಆಗಿ ನೇಮಕಗೊಂಡಿರುವ ಹರಿಬಾಬು ಕಂಬಂಪತಿ ಅವರಿಂದ ತೆರವಾದ ಮಿಜೋರಾಂ ರಾಜ್ಯಪಾಲರ ಹುದ್ದೆಯನ್ನು ಸಿಂಗ್ ಅಲಂಕರಿಸಲಿದ್ದಾರೆ.
1951 ರಲ್ಲಿ ಜನಿಸಿದ ವಿಕೆ ಸಿಂಗ್ ಅವರು, 2010 ರಿಂದ 2012 ರವರೆಗೆ 24ನೇ ಸೇನಾ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದರು.
ಮಿಲಿಟರಿಯಿಂದ ನಿವೃತ್ತರಾದ ನಂತರ ಅವರು 2014 ರಲ್ಲಿ ಬಿಜೆಪಿ ಸೇರಿದರು ಮತ್ತು ಉತ್ತರ ಪ್ರದೇಶದ ಗಾಜಿಯಾಬಾದ್‌ನಿಂದ ಲೋಕಸಭೆಗೆ ಆಯ್ಕೆಯಾದರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೊದಲ ಅವಧಿಯಲ್ಲಿ, ಸಿಂಗ್ ಅವರು ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



