ಮಣಿಪುರ ಹಿಂಸಾಚಾರಕ್ಕೆ ಕ್ಷಮೆಯಾಚಿಸಿದ ಸಿಎಂ; ಪ್ರಧಾನಿ ಮೋದಿ ಏಕೆ ಕ್ಷಮೆಯಾಚಿಸುತ್ತಿಲ್ಲ?: ಕಾಂಗ್ರೆಸ್
"ಪ್ರಧಾನಿ ಅವರು ಮಣಿಪುರಕ್ಕೆ ಹೋಗಿ, ಸಿಎಂ ಹೇಳಿದ ಮಾತನ್ನು ಏಕೆ ಹೇಳಬಾರದು? ಅವರು ಮೇ 4, 2023 ರಿಂದ ದೇಶ ಮತ್ತು ಪ್ರಪಂಚದಾದ್ಯಂತ ಪ್ರವಾಸ ಮಾಡಿದ್ದರೂ ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಪ್ಪಿಸಿದ್ದಾರೆ"

ನವದೆಹಲಿ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮಂಗಳವಾರ ರಾಜ್ಯದಲ್ಲಿನ ಜನಾಂಗೀಯ ಸಂಘರ್ಷಕ್ಕೆ ಕ್ಷಮೆಯಾಚಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಮತ್ತು ಪ್ರಪಂಚದಾದ್ಯಂತ ಪ್ರವಾಸ ಮಾಡಿದರೂ ಹಿಂಸಾಚಾರ ಪೀಡಿತ ರಾಜ್ಯಕ್ಕೆ ಹೋಗಲಿಲ್ಲ. ಹೀಗಾಗಿ ಸಿಎಂ ರೀತಿ ಪ್ರಧಾನಿ ಏಕೆ ಕ್ಷಮೆಯಾಚಿಸಬಾರದು? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಪ್ರಧಾನಿ ಮೋದಿ ಉದ್ದೇಶಪೂರ್ವಕವಾಗಿ ಮಣಿಪುರಕ್ಕೆ ಭೇಟಿ ನೀಡುವುದನ್ನು ತಪ್ಪಿಸುತ್ತಿದ್ದಾರೆ. ಪ್ರಧಾನಿ ಅವರ ನಿರ್ಲಕ್ಷ್ಯವನ್ನು ಮಣಿಪುರದ ಜನ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
"ಪ್ರಧಾನಿ ಅವರು ಮಣಿಪುರಕ್ಕೆ ಹೋಗಿ, ಸಿಎಂ ಹೇಳಿದ ಮಾತನ್ನು ಏಕೆ ಹೇಳಬಾರದು? ಅವರು ಮೇ 4, 2023 ರಿಂದ ದೇಶ ಮತ್ತು ಪ್ರಪಂಚದಾದ್ಯಂತ ಪ್ರವಾಸ ಮಾಡಿದ್ದರೂ ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡುವುದನ್ನು ಉದ್ದೇಶಪೂರ್ವಕವಾಗಿ ತಪ್ಪಿಸಿದ್ದಾರೆ" ಎಂದು ರಮೇಶ್ ತಮ್ಮ ಪೋಸ್ಟ್‌ನಲ್ಲಿ ಆರೋಪಿಸಿದ್ದಾರೆ.
"ಮಣಿಪುರದ ಜನರು ಈ ನಿರ್ಲಕ್ಷ್ಯವನ್ನು ಸರಳವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ" ಎಂದು ಅವರು ಹೇಳಿದ್ದಾರೆ.
ಮಣಿಪುರದಲ್ಲಿ ನಡೆದ ಜನಾಂಗೀಯ ಸಂಘರ್ಷಕ್ಕೆ ಬಿರೇನ್ ಸಿಂಗ್ ಕ್ಷಮೆ ಯಾಚಿಸಿದ ಕೆಲವೇ ಗಂಟೆಗಳ ನಂತರ ಕಾಂಗ್ರೆಸ್, ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.
"ಈ ವರ್ಷ ರಾಜ್ಯದಲ್ಲಿ ಏನಾಯಿತು ಎಂಬುದಕ್ಕೆ ನಾನು ಕ್ಷಮೆಯಾಚಿಸುತ್ತೇನೆ. ಅನೇಕ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡರು ಮತ್ತು ಅನೇಕರು ತಮ್ಮ ಮನೆಗಳನ್ನು ತೊರೆಯಬೇಕಾಯಿತು. ನಾನು ಈ ಕುರಿತು ವಿಷಾದಿಸುತ್ತೇನೆ ಮತ್ತು ಕ್ಷಮೆಯಾಚಿಸಲು ಬಯಸುತ್ತೇನೆ. ಆದರೆ ಕಳೆದ ಮೂರ್ನಾಲ್ಕು ತಿಂಗಳಲ್ಲಿ ರಾಜ್ಯ ಸಹಜ ಸ್ಥಿತಿಗೆ ಮರಳುತ್ತಿದ್ದು, ಹೊಸ ವರ್ಷದಲ್ಲಿ ಶಾಂತಿ ಸ್ಥಾಪನೆಯಾಗಲಿ ಎಂದು ನಾನು ಆಶಿಸುತ್ತೇನೆ ಮಣಿಪುರ ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



