ಕೇಂದ್ರ ಬಜೆಟ್ 2024-25 ಪ್ರಸ್ತಾಪಗಳು 4 ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ಸೀತಾರಾಮನ್
ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್ಗೆ ಒತ್ತು ಕೊಡಲಾಗುತ್ತಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ.

ನವದೆಹಲಿ: ದೇಶಕ್ಕೆ ಹೊಸ ದಿಕ್ಕು ಮತ್ತು ಭರವಸೆ ಸಿಕ್ಕಿದೆ, ಎಲ್ಲರಿಗೂ ಮನೆ, ಎಲ್ಲರಿಗೂ ನೀರು, ಪ್ರತಿ ಮನೆಗೆ ವಿದ್ಯುತ್ಗೆ ಒತ್ತು ಕೊಡಲಾಗುತ್ತಿದೆ. ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆಗಳು ಕಂಡುಬರುತ್ತಿವೆ. ಸರ್ಕಾರದ ಯೋಜನೆಗಳು ಸಾರ್ವಜನಿಕರಿಗೆ ತಲುಪುತ್ತಿವೆ ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇಂದು ಮಂಡನೆಯಾಗುತ್ತಿರುವ ಬಜೆಟ್'ನ 4 ಅಂಶಗಳನ್ನು ಹೆಸರಿಸಿದ್ದಾರೆ.
4 ಅಂಶಗಳು ಇಂತಿವೆ...
- ಬಡವರು
- ಮಹಿಳೆಯರು
- ಯುವಕರು
- ಅನ್ನದಾತರು
ಬಜೆಟ್ನ ಮೊದಲ ಆಧಾರ ಸ್ತಂಭವಾಗಿರುವ ಬಡವರ ಅಭಿವೃದ್ಧಿಗೆ ಕೇಂದ್ರ ಹಣಕಾಸು ಸಚಿವರು ಹೆಚ್ಚಿನ ಒತ್ತು ನೀಡಿದ್ದು. ಬಹಳಷ್ಟು ಅನುದಾನ ಬಿಡುಗಡೆ ಮಾಡಿದ್ದಾರೆ.
ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತವು ಆರ್ಥಿಕವಾಗಿ ಬಲಿಷ್ಠವಾಗುತ್ತಿದೆ. ಕೊರೋನಾದಂತಹ ಶತಮಾನದ ಬಿಕ್ಕಟ್ಟಿನ ಮಧ್ಯೆಯೂ ಭಾರತವು ಸಕಲ ಕ್ಷೇತ್ರಗಳಲ್ಲಿ ಏಳಿಗೆ ಹೊಂದುತ್ತಿದೆ. ಉಜ್ವಲ ಭವಿಷ್ಯದತ್ತ ಭಾರತ ಹೆಜ್ಜೆ ಹಾಕುತ್ತಿದೆ. ಸುಭದ್ರ ಸರ್ಕಾರಕ್ಕೆ ಜನ ಬಹುಮತ ನೀಡಿದ್ದರಿಂದ ಇದೆಲ್ಲ ಸಾಕಾರವಾಗುತ್ತಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ಮಂತ್ರವು ಕೇಂದ್ರ ಸರ್ಕಾರದ ಗುರಿಯಾಗಿದೆ ಎಂದು ಹೇಳಿದರು.
ಬಜೆಟ್ ಭಾಷಣದ ಆರಂಭದಲ್ಲಿ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಪ್ರಗತಿಯನ್ನು ನಿರ್ಮಲಾ ಸೀತಾರಾನ್ ಅವರು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


