ಜ್ಞಾನವಾಪಿ ಪ್ರಕರಣ: ಹಿಂದೂಗಳ ಪೂಜೆಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ನಕಾರ
ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳ ಪೂಜೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.

ಅಲಹಾಬಾದ್: ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂಗಳ ಪೂಜೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ನಕಾರ ವ್ಯಕ್ತಪಡಿಸಿದೆ.
ವಿವಾದಿತ ಜ್ಞಾನವಾಪಿ ಮಸೀದಿಯ ದಕ್ಷಿಣದ ನೆಲಮಾಳಿಗೆಯಲ್ಲಿ (ವ್ಯಾಸ್ ತೆಹ್ಖಾನಾ) ಹಿಂದೂಗಳು ಪೂಜೆ ನಡೆಸಲು ಅನುಮತಿ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಆದರೆ, ಈ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
ವಾರಾಣಾಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಮಸೀದಿಯೊಳಗೆ ಹಿಂದೂಗಳಿಗೆ ಪೂಜೆಗೆ ಅವಕಾಶ ನೀಡಿ ಜನವರಿ 31ರಂದು ಆದೇಶ ನೀಡಿದ್ದರು. ಏಳು ದಿನಗಳೊಳಗೆ ಪೂಜೆಗೆ ಬೇಕಾದ ವ್ಯವಸ್ಥೆ ಮಾಡಿ ಕೊಡುವಂತೆ ಜಿಲ್ಲಾಡಳಿತಕ್ಕೆ ಆದೇಶಿಸಿದ್ದರು. ನ್ಯಾಯಾಲಯ ಆದೇಶ ನೀಡಿದ ದಿನದಂದೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿ ಕೊಟ್ಟಿತ್ತು. ಅಂದೇ ಪೂಜೆ ಕೂಡ ಪ್ರಾರಂಭಗೊಂಡಿದೆ.
ಆದರೆ ಇದರ ನಡುವೆಯೇ ವಾರಾಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಗುರುವಾರ ಜ್ಞಾನವಾಪಿ ಮಸೀದಿ ನಿರ್ವಹಣೆ ಮಾಡುವ ಅಂಜುಮನ್ ಇಂತೇಝಾಮಿಯಾ ಮಸಾಜಿದ್ ಸಮಿತಿ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿತ್ತು. ಮಸೀದಿ ಸಮಿತಿಯ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಾಧೀಶರಾದ ರೋಹಿತ್ ರಂಜನ್ ಅಗರ್ವಾಲ್ ಅವರ ಪೀಠವು ಜಿಲ್ಲಾ ಕೋರ್ಟ್ ಆದೇಶಕ್ಕೆ ಮದ್ಯಂತರ ತಡೆ ನೀಡಲು ನಿರಾಕರಿಸಿದೆ.
ಜಿಲ್ಲಾಧಿಕಾರಿಯನ್ನು ರಿಸೀವರ್ ಆಗಿ ನೇಮಿಸಿರುವ ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಜನವರಿ 17 ರ ಆದೇಶವನ್ನು ಮಸೀದಿ ಸಮಿತಿ ಪ್ರಶ್ನಿಸಿಲ್ಲ ಎಂದು ಪೀಠ ಹೇಳಿದೆ. ಅಲ್ಲದೆ ತಮ್ಮ ಮೇಲ್ಮನವಿಯನ್ನು ತಿದ್ದುಪಡಿ ಮಾಡಲು ನ್ಯಾಯಾಲಯವು ಫೆಬ್ರವರಿ 6 ರವರೆಗೆ ಮಸೀದಿ ಸಮಿತಿಗೆ ಸಮಯ ನೀಡಿದ್ದು, ಜ್ಞಾನವಾಪಿ ಪ್ರದೇಶದಲ್ಲಿ ಕಾನೂನು, ಸುವ್ಯವಸ್ಥೆ ಕಾಪಾಡಲು ಅಡ್ವೊಕೇಟ್ ಜನರಲ್‌ಗೆ ಸೂಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


