ರಾಜ್ಯಸಭೆ: ಜಾರ್ಖಂಡ್ ವಿಚಾರವಾಗಿ ಕಾಂಗ್ರೆಸ್, ಇತರ ಪ್ರತಿಪಕ್ಷಗಳಿಂದ ಸಭಾತ್ಯಾಗ
ಜೆಎಂಎಂ ನಾಯಕ ಹೇಮಂತ್ ಸೋರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜಾರ್ಖಂಡ್ ರಾಜ್ಯಪಾಲರು ರಾಜ್ಯದಲ್ಲಿ ಆಡಳಿತಕ್ಕೆ ಮಧ್ಯಂತರ ವ್ಯವಸ್ಥೆಗಳನ್ನು ಮಾಡದಿರುವುದನ್ನು ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ...

ನವದೆಹಲಿ: ಜೆಎಂಎಂ ನಾಯಕ ಹೇಮಂತ್ ಸೋರೆನ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜಾರ್ಖಂಡ್ ರಾಜ್ಯಪಾಲರು ರಾಜ್ಯದಲ್ಲಿ ಆಡಳಿತಕ್ಕೆ ಮಧ್ಯಂತರ ವ್ಯವಸ್ಥೆಗಳನ್ನು ಮಾಡದಿರುವುದನ್ನು ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಶುಕ್ರವಾರ ರಾಜ್ಯಸಭೆಯಿಂದ ಹೊರನಡೆದವು.
ಇಂದು ರಾಜ್ಯಸಭೆಯಲ್ಲಿ ಜಾರ್ಖಂಡ್ ವಿಚಾರ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಂದು ವಾರದ ಹಿಂದೆ ನೆರೆಯ ಬಿಹಾರದಲ್ಲಿ ನಡೆದ ಘಟನೆಗಳನ್ನು ಉಲ್ಲೇಖಿಸಿದರು. ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅವರ ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸಲಾಯಿತು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯುವಂತೆ ಸೂಚಿಸಲಾಯಿತು ಮತ್ತು ಮತ್ತೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎಲ್ಲವೂ ಕೇವಲ 12 ಗಂಟೆಗಳಲ್ಲಿ ನಡೆಯಿತು.
ಆದರೆ ಜಾರ್ಖಂಡ್‌ನಲ್ಲಿ ಸೋರೆನ್ ಬುಧವಾರ ರಾಜೀನಾಮೆ ನೀಡಿದಾಗ ಯಾವುದೇ ಮಧ್ಯಂತರ ವ್ಯವಸ್ಥೆ ಮಾಡಿಲ್ಲ ಎಂದು ಖರ್ಗೆ ಹೇಳಿದರು.
ಸೋರೆನ್ ರಾಜೀನಾಮೆ ನೀಡಿದ ನಂತರ, 81 ಸದಸ್ಯರ ವಿಧಾನಸಭೆಯಲ್ಲಿ 43 ಬೆಂಬಲಿಗ ಶಾಸಕರ ಸಹಿಯೊಂದಿಗೆ ಅವರ ಉತ್ತರಾಧಿಕಾರಿಯ ಹೆಸರನ್ನು ನೀಡಲಾಗಿದೆ. ಆದರೂ ನೂತನ ಸರ್ಕಾರ ರಚನೆಗೆ ಆಹ್ವಾನ ನೀಡಿಲ್ಲ ಮತ್ತು ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದರು ಖರ್ಗೆ ತಿಳಿಸಿದರು.
ಇದನ್ನೂ ಓದಿ: ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ; ಕಾಂಗ್ರೆಸ್ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ
"ಸೋರೆನ್ ರಾಜೀನಾಮೆ ನಂತರ ಗವರ್ನರ್ ಸಿ ಪಿ ರಾಧಾಕೃಷ್ಣನ್ ಅವರು ಯಾವುದೇ ಪರ್ಯಾಯ ವ್ಯವಸ್ಥೆ ಮಾಡಲಿಲ್ಲ. ಮುಖ್ಯಮಂತ್ರಿಗಳು ರಾಜೀನಾಮೆ ನೀಡಿದ ಸಂದರ್ಭದಲ್ಲಿ ಸರ್ಕಾರ ಅಸ್ತಿತ್ವದಲ್ಲಿರಲು ಸಂವಿಧಾನ ಅವಕಾಶ ನೀಡುತ್ತದೆ ಮತ್ತು ಪರ್ಯಾಯ ವ್ಯವಸ್ಥೆ ಮಾಡುವವರೆಗೆ ರಾಜೀನಾಮೆ ನೀಡುವ ಮುಖ್ಯಮಂತ್ರಿ ಅಥವಾ ಇತರ ವ್ಯಕ್ತಿಯನ್ನು ಹಂಗಾಮಿಯಾಗಿ ಮುಂದುವರಿಸಲು ಅವಕಾಶ ಇದೆ ಎಂದರು.
ಶಾಸಕರ ಬೆಂಬಲ ತೋರಿಸುವ ಪಕ್ಷವನ್ನು ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಬೇಕು. ಆದರೆ ಜಾರ್ಖಂಡ್ ರಾಜ್ಯಪಾಲರು ಸುಮಾರು 20 ಗಂಟೆಗಳ ನಂತರ ಜಾರ್ಖಂಡ್ ಮುಕ್ತಿ ಮೋರ್ಚಾದ(ಜೆಎಂಎಂ) ಶಾಸಕಾಂಗ ಪಕ್ಷದ ನಾಯಕ ಚಂಪೈ ಸೋರೆನ್ ಅವರಿಗೆ ತಮ್ಮನ್ನು ಭೇಟಿ ಮಾಡಲು ಅವಕಾಶ ನೀಡುತ್ತಾರೆ. ಇನ್ನೂ ಶಾಸಕ ಬೆಂಬಲದ ಪತ್ರ ನೀಡಿದರೂ ಅವರಿಗೆ ಸರ್ಕಾರ ರಚಿಸಲು ಆಹ್ವಾನಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ಹೇಳಿದರು.
ಕೊನೆಗೆ ಇಂದು ಚಂಪೈ ಸೋರೆನ್ ಅವರು ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರದಲ್ಲಿ ನಡೆದಂತೆ ಜಾರ್ಖಂಡ್‌ನಲ್ಲಿ ಏಕೆ ನಡೆಯಲಿಲ್ಲ? ಎಂದು ಖರ್ಗೆ ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


