ಮುಂಬೈ ನಗರದ 6 ಕಡೆ ಸರಣಿ ಬಾಂಬ್ ಸ್ಫೋಟದ ಬೆದರಿಕೆ ಸಂದೇಶ: ಪೊಲೀಸರ ತೀವ್ರ ಕಟ್ಟೆಚ್ಚರ, ತಪಾಸಣೆ
ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ.

ಮುಂಬೈ: ವಾಣಿಜ್ಯ ನಗರಿ ಮುಂಬೈಯ 6 ಕಡೆಗಳಲ್ಲಿ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಮುಂಬೈನ 6 ಸ್ಥಳಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತರು ಬೆದರಿಕೆ ಕರೆ ಮಾಡಿದ್ದಾರೆ.
ಮುಂಬೈ ಸಂಚಾರ ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಮಾಹಿತಿ ರವಾನೆಯಾಗಿದ್ದು, ಸಂದೇಶ ಕಳುಹಿಸಿದವ ಬಗ್ಗೆ ಮಾಹಿತಿ ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಆರಂಭಿಸಿದ್ದಾರೆ.
ಮುಂಬೈ ಪೊಲೀಸರ ಅಪರಾಧ ವಿಭಾಗ ಮತ್ತು ಮಹಾರಾಷ್ಟ್ರ ಎಟಿಎಸ್ (ಭಯೋತ್ಪಾದನಾ ನಿಗ್ರಹ ದಳ) ಬೆದರಿಕೆ ಸಂದೇಶದ ಬಗ್ಗೆ ಎಚ್ಚರಿಕೆ ನೀಡಿದ್ದು, ಕಳುಹಿಸಿದವರ ಪತ್ತೆಗೆ ತನಿಖೆ ನಡೆಯುತ್ತಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505 (2) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಮುಂಬೈ ನಗರದಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಫೋನ್ ಅಥವಾ ಸಂದೇಶ ಬಂದಿರುವುದು ಇದೇ ಮೊದಲಲ್ಲ. ಈ ಮೊದಲು ಮುಂಬೈ ಪೊಲೀಸ್ ಮತ್ತು ಕಂಟ್ರೋಲ್ ರೂಂಗೆ ಬೆದರಿಕೆಗಳು ಬಂದಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


