ಬಿಜೆಪಿ 'ಮತಗಳು ಚದುರಿ ಹೋಗಬಾರದು' ಎಂಬ ಕಾರಣಕ್ಕೆ ಅಡ್ವಾಣಿಗೆ ಭಾರತ ರತ್ನ ನೀಡಿದ್ದಾರೆ: ಅಖಿಲೇಶ್ ಯಾದವ್
ಕೇಸರಿ ಪಕ್ಷದ "ಮತಗಳು ಚದುರಿಹೋಗಬಾರದು" ಎಂಬ ಕಾರಣಕ್ಕೆ ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು...

ಲಖನೌ: ಕೇಸರಿ ಪಕ್ಷದ "ಮತಗಳು ಚದುರಿಹೋಗಬಾರದು" ಎಂಬ ಕಾರಣಕ್ಕೆ ಬಿಜೆಪಿ ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಶನಿವಾರ ಹೇಳಿದ್ದಾರೆ.
ಬಿಜೆಪಿ ಹಿರಿಯ ನಾಯಕನಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಘೋಷಿಸಿದ ಕೆಲವೇ ಗಂಟೆಗಳ ನಂತರ ಯಾದವ್ ಈ ಹೇಳಿಕೆ ನೀಡಿದ್ದಾರೆ.
ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದರು ಮತ್ತು ಇದು ಅವರಿಗೆ "ಅತ್ಯಂತ ಭಾವನಾತ್ಮಕ ಕ್ಷಣ" ಎಂದು ಬಣ್ಣಿಸಿದ್ದರು.
ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಿಸಿದ ಬಗ್ಗೆ ಪ್ರತಿಕ್ರಿಯಿಸಿದ ಎಸ್‌ಪಿ ಮುಖ್ಯಸ್ಥರು, "ಬಿಜೆಪಿ ತನ್ನ ಅಧಿಕಾರಾವಧಿ ಮುಗಿಯುವ ಮುನ್ನ(ಕೇಂದ್ರದಲ್ಲಿ) ಕೇಸರಿ ಪಕ್ಷದ ಮತಗಳು ಚದುರಿಹೋಗದಂತೆ ತಡೆಯಲು ಅವರಿಗೆ ಪ್ರತಿಷ್ಠಿತ ಪ್ರಶಸ್ತಿ ನೀಡಿದೆ" ಎಂದರು.
"ಈ ಭಾರತ ರತ್ನವನ್ನು ತಮ್ಮ ಸ್ವಂತ ಮತಗಳನ್ನು ಕ್ರೋಢೀಕರಿಸಲು ನೀಡಲಾಗುತ್ತಿದೆ. ಅವರನ್ನು ಗೌರವಿಸಬೇಕು ಎಂದು ನೀಡುತ್ತಿಲ್ಲ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ತಿಳಿಸಿದ್ದಾರೆ.
ಇದೇ ವೇಳೆ ಇಂಡಿಯಾ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಯಾದವ್, ಸೀಟು ಹಂಚಿಕೆಯಲ್ಲಿ ಬಹುತೇಕ ಒಮ್ಮತವಿದೆ. ಸೀಟು ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಪಾಲ್ಗೊಳ್ಳುತ್ತೀರಾ ಎಂಬ ಪ್ರಶ್ನೆಗೆ, ಅವರು ಇನ್ನೂ ನನಗೆ ಯಾವುದೇ ಆಹ್ವಾನ ನೀಡಿಲ್ಲ ಎಂದು ಯಾದವ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


