ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸ ಮತ ಗೆದ್ದ ಸಿಎಂ ಚಂಪೈ ಸೋರೆನ್
ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.

ರಾಂಚಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ.
ಇಂದು ವಿಶೇಷ ಅಧಿವೇಶನದಲ್ಲಿ ಸಿಎಂ ಚಂಪೈ ಸೋರೆನ್ ಅವರು ವಿಶ್ವಾಸ ಮತಯಾಚಿಸಿದರು. ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಕೂಟ 47 ಶಾಸಕರು ಕೈ ಎತ್ತುವ ಮೂಲಕ ಚಂಪೈ ಸರ್ಕಾರಕ್ಕೆ ಬಂಬಲ ನೀಡಿದರು. 29 ಶಾಸಕರು ವಿಶ್ವಾಸಮತದ ವಿರುದ್ಧವಾಗಿ ಕೈ ಎತ್ತಿದರು.
ಇದಕ್ಕು ಮುನ್ನ ವಿಧಾನಸಭೆಯಲ್ಲಿ ಮಾತನಾಡಿದ ಬಂಧನಕ್ಕೊಳಗಾಗಿರುವ ಮಾಜಿ ಸಿಎಂ ಹೇಮಂತ್ ಸೋರೆನ್ ತಮ್ಮ ಬಂಧನಕ್ಕೆ ಬಿಜೆಪಿ ಕಾರಣ ಎಂದು ದೂಷಿಸಿದರು.
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಜನವರಿ 31 ರಂದು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಈಗ ಇಡಿ ಕಸ್ಟಡಿಯಲ್ಲಿದ್ದಾರೆ. ವಿಶ್ವಾಸ ಮತಕ್ಕಾಗಿ ವಿಧಾನಸಭೆಯಲ್ಲಿ ಹಾಜರಾಗಲು ಇಡಿ ಮಾಜಿ ಸಿಎಂ ಅವಕಾಶ ನೀಡಿದೆ.
ಕಳೆದ ಸಂಜೆ, ಆಡಳಿತಾರೂಢ ಜೆಎಂಎಂ ನೇತೃತ್ವದ ಮೈತ್ರಿಕೂಟದ ಶಾಸಕರು ಹೈದರಾಬಾದ್ ನಿಂದ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


