ಮ್ಯಾನ್ಮಾರ್: ತೀವ್ರ ಹಿಂಸಾಚಾರ, ರಖೈನ್ ತೊರೆಯುವಂತೆ ತನ್ನ ನಾಗರಿಕರಿಗೆ ಭಾರತ ಮನವಿ
ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಪ್ರಕ್ಷುಬ್ಧ ಪ್ರದೇಶವನ್ನು ತೊರೆಯುವಂತೆ ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿರುವ ತನ್ನ ನಾಗರಿಕರಿಗೆ ಭಾರತ ಮಂಗಳವಾರ ಕೇಳಿಕೊಂಡಿದೆ.

ನವದೆಹಲಿ: ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣವೇ ಪ್ರಕ್ಷುಬ್ಧ ಪ್ರದೇಶವನ್ನು ತೊರೆಯುವಂತೆ ಮ್ಯಾನ್ಮಾರ್‌ನ ರಖೈನ್ ರಾಜ್ಯದಲ್ಲಿರುವ ತನ್ನ ನಾಗರಿಕರಿಗೆ ಭಾರತ ಮಂಗಳವಾರ ಕೇಳಿಕೊಂಡಿದೆ. ತೀವ್ರ ಹಿಂಸಾಚಾರದ ನಂತರ ದೂರಸಂಪರ್ಕ ಜಾಲದಲ್ಲಿ ಅಡಚಣೆ ಮತ್ತು ಅಗತ್ಯ ವಸ್ತುಗಳ ಕೊರತೆ ಸೇರಿದಂತೆ ಪ್ರಸ್ತುತದಲ್ಲಿನ ಪ್ರಕ್ಷುಬ್ದ ಪರಿಸ್ಥಿತಿಯಿಂದಾಗಿ ರಖೈನ್ ರಾಜ್ಯಕ್ಕೆ ಪ್ರಯಾಣಿಸದಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಭಾರತೀಯರನ್ನು ಕೇಳಿದೆ.
ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿ, ಲ್ಯಾಂಡ್‌ಲೈನ್‌ಗಳು ಸೇರಿದಂತೆ ದೂರಸಂಪರ್ಕ ಮತ್ತು ಅಗತ್ಯ ವಸ್ತುಗಳ ತೀವ್ರ ಕೊರತೆಯ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯ ನಾಗರಿಕರು ಮ್ಯಾನ್ಮಾರ್‌ನ ರಖೈನ್ ರಾಜ್ಯಕ್ಕೆ ಪ್ರಯಾಣಿಸದಂತೆ ಸೂಚಿಸಲಾಗಿದೆ ಎಂದು ಅದು ಹೇಳಿದೆ. ಈಗಾಗಲೇ ರಖೈನ್ ರಾಜ್ಯದಲ್ಲಿ ಇರುವ ಭಾರತೀಯ ನಾಗರಿಕರು ತಕ್ಷಣವೇ ರಾಜ್ಯವನ್ನು ತೊರೆಯುವಂತೆ ಸೂಚಿಸಲಾಗಿದೆ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಫೆಬ್ರವರಿ 1, 2021 ರ ದಂಗೆಯಲ್ಲಿ ಮಿಲಿಟರಿ ಅಧಿಕಾರವನ್ನು ವಶಪಡಿಸಿಕೊಂಡಾಗಿನಿಂದ ಮ್ಯಾನ್ಮಾರ್ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ವ್ಯಾಪಕ ಹಿಂಸಾತ್ಮಕ ಪ್ರತಿಭಟನೆಗಳಿಗೆ ಸಾಕ್ಷಿಯಾಗಿದೆ. ರಖೈನ್ ರಾಜ್ಯ ಮತ್ತು ಇತರ ಹಲವು ಪ್ರದೇಶಗಳು ಕಳೆದ ವರ್ಷ ಅಕ್ಟೋಬರ್‌ನಿಂದ ಸಶಸ್ತ್ರ ಜನಾಂಗೀಯ ಗುಂಪುಗಳು ಮತ್ತು ಮ್ಯಾನ್ಮಾರ್ ಸೇನೆಯ ನಡುವೆ ತೀವ್ರ ಹೋರಾಟಕ್ಕೆ ಸಾಕ್ಷಿಯಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


