ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಪಂಜಾಬಿ ವಲಸೆ ಕಾರ್ಮಿಕನಿಗೆ ಗುಂಡಿಕ್ಕಿ ಹತ್ಯೆ
ಹಬ್ಬಾ ಕಡಲ್ ಪ್ರದೇಶದಲ್ಲಿ ಇಂದು ಭಯೋತ್ಪಾದಕರು ಪಂಜಾಬ್‌ನ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮತ್ತೊಬ್ಬನಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ: ಹಬ್ಬಾ ಕಡಲ್ ಪ್ರದೇಶದಲ್ಲಿ ಇಂದು ಭಯೋತ್ಪಾದಕರು ಪಂಜಾಬ್‌ನ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಮತ್ತೊಬ್ಬನಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಮೃತಸರ ನಿವಾಸಿ ಅಮೃತಪಾಲ್ ಸಿಂಗ್ ಅವರನ್ನು ರಾತ್ರಿ 7 ಗಂಟೆ ಸುಮಾರಿಗೆ ಹಬ್ಬಾ ಕಡಲ್‌ನ ಪಾಯಿಂಟ್ ಬ್ಲಾಂಕ್ ರೇಂಜ್ ನಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಸ್ಥಳೀಯೇತರ ಕೆಲಸಗಾರ 25 ವರ್ಷದ ರೋಹಿತ್ ಗಾಯಗೊಂಡಿದ್ದು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಹಿತ್ ಕೂಡ ಅಮೃತಸರ ಮೂಲದವರು. ಹೊಟ್ಟೆಗೆ ಗುಂಡು ತಗುಲಿದ್ದು, ಇಲ್ಲಿನ ಎಸ್‌ಎಂಎಚ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ರೀನಗರದಲ್ಲಿ ಅಮೃತಸರದ ಅಮೃತಪಾಲ್ ಸಿಂಗ್ ಎಂಬುವರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ದಾಳಿಯ ನಂತರ ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದು ಭಯೋತ್ಪಾದಕರ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಅವರು ಸ್ಥಳೀಯರಲ್ಲದವರ ಮೇಲಿನ ದಾಳಿಯನ್ನು ಖಂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


