ಮಧ್ಯಪ್ರದೇಶ ಕಾಂಗ್ರೆಸ್ ಗೆ ಆಘಾತ: ದಿಗ್ವಿಜಯ್ ಸಿಂಗ್ ಆಪ್ತ ಬಿಜೆಪಿ ಸೇರ್ಪಡೆ!
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಮಧ್ಯಪ್ರದೇಶ ಕಾಂಗ್ರೆಸ್ ಗೆ ಮರ್ಮಾಘಾತ ಎದುರಾಗಿದ್ದು, ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ ಸುಮೇರ್ ಸಿಂಗ್ ಬುಧವಾರ BJPಗೆ ಸೇರ್ಪಡೆಯಾಗಿದ್ದಾರೆ.

ಭೋಪಾಲ್: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಮಧ್ಯಪ್ರದೇಶ ಕಾಂಗ್ರೆಸ್ ಗೆ ಮರ್ಮಾಘಾತ ಎದುರಾಗಿದ್ದು, ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ ಸುಮೇರ್ ಸಿಂಗ್ ಬುಧವಾರ BJPಗೆ ಸೇರ್ಪಡೆಯಾಗಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ನಿಕಟವರ್ತಿ ಎಂದು ಹೇಳಲಾಗುತ್ತಿರುವ ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಸುಮೇರ್ ಸಿಂಗ್ ಅವರು ಬುಧವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಉಪಸ್ಥಿತಿಯಲ್ಲಿ ಭಾರತೀಯ ಜನತಾ ಪಕ್ಷ (BJP)ಕ್ಕೆ ಸೇರ್ಪಡೆಗೊಂಡರು. ಸುಮೇರ್ ಸಿಂಗ್ ಜೊತೆಗೆ, ಅವರ ಪುತ್ರ ಧನಂಜಯ್ ಸಿಂಗ್ ಸೇರಿದಂತೆ ಅವರ ಹಲವಾರು ಬೆಂಬಲಿಗರು ಕೂಡ ಕೇಸರಿ ಪಕ್ಷಕ್ಕೆ ಸೇರಿದ್ದಾರೆ.
ದಿಗ್ವಿಜಯ ಸಿಂಗ್ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಸುಮೇರ್ ಸಿಂಗ್ ಅವರನ್ನು ರಾಜ್ಯ ಲೋಕಸೇವಾ ಆಯೋಗದ (ಪಿಎಸ್‌ಸಿ) ಸದಸ್ಯರನ್ನಾಗಿ ನೇಮಿಸಲಾಗಿತ್ತು. ಅಲ್ಲದೆ ಸುಮೇರ್ ಸಿಂಗ್ ಅವರನ್ನು ದಿಗ್ವಿಜಯ ಸಿಂಗ್ ಅವರ ಕುಟುಂಬದ ಸದಸ್ಯ ಎಂದೇ ಹೇಳಲಾಗುತ್ತಿತ್ತು. 2010-15ರ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಗುಣಾ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿಯೂ ಸುಮೇರ್ ಸಿಂಗ್ ಆಯ್ಕೆಯಾಗಿದ್ದರು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
2020ರಲ್ಲಿ ಬಿಜೆಪಿ ಪಕ್ಷಕ್ಕೆ ಬದಲಾದ ಸಿಂಧಿಯಾ ಅವರ ಸಮ್ಮುಖದಲ್ಲಿ ಗುಣ ಸರ್ಕ್ಯೂಟ್ ಹೌಸ್‌ನಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ಸೇರಿರುವುದು ವಿಶೇಷವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


