13 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್!
ಇಲ್ಲಿನ 13 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು.

ಚೆನ್ನೈ: ಇಲ್ಲಿನ 13 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು.
ಇ-ಮೇಲ್ ಬೆದರಿಕೆ ಪರಿಣಾಮ ವಿದ್ಯಾರ್ಥಿಗಳನ್ನು ಶಾಲ ಅವಧಿ ಮುಗಿಯುವುದಕ್ಕೂ ಮುನ್ನ ಮನೆಗೆ ಕಳುಹಿಸಲಾಯಿತು. ಇ-ಮೇಲ್ ಗಳನ್ನು ಪರಿಶೀಲನೆ ಮಾಡಿದ ಬಳಿಕ ಹುಸಿ ಬೆದರಿಕೆ ಇದಾಗಿದೆ ಎಂಬುದು ದೃಢಪಟ್ಟಿದೆ. ಇ-ಮೇಲ್ ಕಳಿಸಿದವನ ಗುರುತನ್ನು ಪತ್ತೆ ಮಾಡಲು ಶೋಧಕಾರ್ಯಾಚರಣೆ ನಡೆಯುತ್ತಿದೆ.
ಒಟ್ಟು 13 ಶಾಲೆಗಳಿಗೆ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಸಿಬ್ಬಂದಿಗಳನ್ನು ಕರೆಸಿ ಪರಿಶೀಲನೆ ನಡೆಸಲಾಯಿತು. ಸಾರ್ವಜನಿಕರು ಭಯಪಡಬೇಕಿಲ್ಲ ಈ ಘಟನೆಯಲ್ಲಿ ಭಾಗಿಯಾಗಿರುವ ವ್ಯಕ್ತಿಯನ್ನು ಗುರುತಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ಜಿಸಿಪಿ ಸಹಾಯಕ ಪೊಲೀಸ್ ಆಯುಕ್ತ ಪ್ರೇಮ್ ಆನಂದ್ ಸಿನ್ಹಾ ತಿಳಿಸಿದ್ದಾರೆ.
ಬೆಳಗ್ಗೆ 10.30 ರಿಂದ 11.00 ರ ನಡುವೆ ಪೊಲೀಸರಿಗೆ ಇಮೇಲ್ಗಳ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಸಿನ್ಹಾ ಹೇಳಿದ್ದಾರೆ. ಶಾಲೆಗಳಿಂದ ಮಾಹಿತಿ ಪಡೆದ ನಂತರ ಅಥವಾ ಸ್ಥಳೀಯ ಟಿವಿ ಚಾನೆಲ್ಗಳಲ್ಲಿ ಸುದ್ದಿ ನೋಡಿದ ನಂತರ ಪೋಷಕರು ಗೋಪಾಲಪುರಂ, ಮೊಗಪ್ಪೈರ್, ಪ್ಯಾರಿಸ್ ಮತ್ತು ಅಣ್ಣಾನಗರದಂತಹ ಪ್ರದೇಶಗಳ ಶಾಲೆಗಳಿಗೆ ಧಾವಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


