ದೇಶ

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಗೋಡೆ ಕುಸಿತ: ಓರ್ವ ಸಾವು, ಹಲವರಿಗೆ ಗಾಯ

ರಾಷ್ಟ್ರ ರಾಜಧಾನಿಯ ಮೆಟ್ರೋ ನಿಲ್ದಾಣವೊಂದರ ಬಳಿ ಗೋಡೆ ಕುಸಿತದಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಗೋಡೆ ಕುಸಿತ: ಓರ್ವ ಸಾವು, ಹಲವರಿಗೆ ಗಾಯ
ಗೋಡೆ ಕುಸಿತವಾದ ಮೆಟ್ರೋ ನಿಲ್ದಾಣದ ಚಿತ್ರ
Published On :

ನವದೆಹಲಿ: ರಾಷ್ಟ್ರ ರಾಜಧಾನಿಯ ಮೆಟ್ರೋ ನಿಲ್ದಾಣವೊಂದರ ಬಳಿ ಗೋಡೆ ಕುಸಿತದಿಂದ ವ್ಯಕ್ತಿಯೋರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ.

ಪಿಂಕ್ ಲೈನ್‌ನಲ್ಲಿರುವ ಗೋಕುಲಪುರಿ ಮೆಟ್ರೋ ನಿಲ್ದಾಣದ ಗೋಡೆಯ ಒಂದು ಭಾಗ ಕುಸಿದಿದ್ದು, ಕಾರವಾಲ್ ನಗರದ 53 ವರ್ಷದ ವಿನೋದ್ ಕುಮಾರ್  ಮೃತಪಟ್ಟಿದ್ದಾರೆ. ಗಾಯಾಳುಗಳು ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. 

ಈ ಘಟನೆ ಸಂಬಂಧ ಓರ್ವ ಮ್ಯಾನೇಜರ್ ಮತ್ತು ಕಿರಿಯ ಎಂಜಿನಿಯರ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ (DMRC) ತಿಳಿಸಿದೆ.

ಮೃತನ ಕುಟುಂಬಕ್ಕೆ ರೂ. 25 ಲಕ್ಷ ಪರಿಹಾರ ಘೋಷಿಸಲಾಗಿದೆ. ಸಣ್ಣಪುಟ್ಟ ಗಾಯಗಳಾದವರಿಗೆ ರೂ. 1 ಲಕ್ಷ  ಹಾಗೂ ಗಂಭೀರ ಗಾಯಗೊಂಡವರಿಗೆ ರೂ. 5 ಲಕ್ಷ ನೀಡುವುದಾಗಿ ದೆಹಲಿ ಮೆಟ್ರೋ ಘೋಷಿಸಿದೆ. ಒಂದು ಗಂಟೆಯೊಳಗೆ ಅವಶೇಷಗಳನ್ನು ರಸ್ತೆಯಿಂದ ತೆರವುಗೊಳಿಸಲಾಗಿದೆ ಎಂದು ಡಿಎಂಆರ್‌ಸಿ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.