ಸೋನಿಯಾ, ರಾಹುಲ್ ಗಾಂಧಿ ತಮ್ಮ ಜಾತಿ, ಧರ್ಮ ಯಾವುದು ಅಂತ ಹೇಳಬಹುದೇ?: ಬಿಜೆಪಿ ಸಂಸದ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರು ತಮ್ಮ ಜಾತಿ ಮತ್ತು ಧರ್ಮ ಯಾವುದು ಎಂದು ಹೇಳಬಹುದೇ? ಎಂದು ಭಾರತೀಯ ಜನತಾ ಪಕ್ಷದ ಸಂಸದ ಹರನಾಥ್ ಯಾದವ್ ಅವರು ಶುಕ್ರವಾರ...

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿ ಅವರು ತಮ್ಮ ಜಾತಿ ಮತ್ತು ಧರ್ಮ ಯಾವುದು ಎಂದು ಹೇಳಬಹುದೇ? ಎಂದು ಭಾರತೀಯ ಜನತಾ ಪಕ್ಷದ ಸಂಸದ ಹರನಾಥ್ ಯಾದವ್ ಅವರು ಶುಕ್ರವಾರ ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 'ಇತರ ಹಿಂದುಳಿದ ಜಾತಿ(ಒಬಿಸಿ)'ಗೆ ಸೇರಿದವರಲ್ಲ ಎಂದು ಟೀಕಿಸಿದ್ದ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸಿದ ಯಾದವ್, ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದಿಂದ ಬಂದಿರುವುದನ್ನು ಕಾಂಗ್ರೆಸ್ ಸಹಿಸುತ್ತಿಲ್ಲ ಎಂದು ಎಎನ್‌ಐಗೆ ತಿಳಿಸಿದ್ದಾರೆ.
"ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರು ತಮ್ಮ ಜಾತಿ ಮತ್ತು ಧರ್ಮವನ್ನು ನಿರ್ದಿಷ್ಟವಾಗಿ ಹೇಳಬಹುದೇ? ತನ್ನ ಜಾತಿ, ಧರ್ಮದ ಬಗ್ಗೆ ಗೊತ್ತಿಲ್ಲದ ವ್ಯಕ್ತಿಗೆ ಇಂತಹ ಮಾತುಗಳನ್ನು ಹೇಳುವ ಹಕ್ಕು ಇಲ್ಲ ಎಂದು ಬಿಜೆಪಿ ಸಂಸದ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ನ ಡಿಎನ್ಎ ಹಿಂದುಳಿದ ವರ್ಗಗಳ ವಿರುದ್ಧವಾಗಿದೆ. ಪ್ರಧಾನಿ ಮೋದಿ ಹಿಂದುಳಿದ ವರ್ಗದಿಂದ ಬಂದಿರುವುದನ್ನು ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ದೇಶದ ಜನರು ಇನ್ನು ಮುಂದೆ ರಾಹುಲ್ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ. ಅವರೇ ಕಾಂಗ್ರೆಸ್ ಅನ್ನು ಅಳಿಸಿ ಹಾಕುತ್ತಾರೆ ಎಂದು ಯಾದವ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


