ಪ್ರಧಾನಿ ಮೋದಿ, ಅಡ್ವಾಣಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಪತ್ರಕರ್ತ ನಿಖಿಲ್ ವಾಗ್ಲೆ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ! ವಿಡಿಯೋ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕಾರನ ಮೇಲೆ ಬಿಜೆಪಿ ಕಾರ್ಯಕರ್ತರು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ.

ಪುಣೆ: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪತ್ರಕರ್ತ ನಿಖಿಲ್ ವಾಗ್ಲೆ ಕಾರನ ಮೇಲೆ ಬಿಜೆಪಿ ಕಾರ್ಯಕರ್ತರು ಶುಕ್ರವಾರ ರಾತ್ರಿ ದಾಳಿ ನಡೆಸಿದ್ದಾರೆ.
ಪುಣೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದ ಪತ್ರಕರ್ತ ನಿಖಿಲ್ ವಾಗ್ಲೆ ಅವರ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಕಾರನ್ನು ಸುತ್ತುವರೆದ ಬಿಜೆಪಿ ಕಾರ್ಯಕರ್ತರ ಗುಂಪು ಕಾರಿನ ವಿಂಡ್‌ಸ್ಕ್ರೀನ್ ಮತ್ತು ಗಾಜುಗಳನ್ನು ಹಾನಿಗೊಳಿಸಿದ್ದು, ಅದರ ಮೇಲೆ ಶಾಯಿಯನ್ನು ಎಸೆದಿರುವುದನ್ನು ವೀಡಿಯೋದಲ್ಲಿ ಸೆರೆಯಾಗಿದೆ.
ಆಡಳಿತ ಪಕ್ಷದ ಹಿರಿಯ ಮುಖಂಡರಿಗೆ ಭಾರತ ರತ್ನ ಘೋಷಣೆ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಲ್ ಕೆ ಅಡ್ವಾಣಿ ಬಗ್ಗೆ ನೀಡಿದ್ದ ಹೇಳಿಕೆ ಹಿನ್ನೆಲೆಯಲ್ಲಿ ವಾಗ್ಲೆ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಮಹಾ ವಿಕಾಸ್ ಆಘಾದಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ನಂತರ ಈ ಘಟನೆ ನಡೆದಿದೆ.
ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ವಾಗ್ಲೆ, ತನ್ನ ಮೇಲೆ ದಾಳಿ ನಡೆಸಿದವರನ್ನು ಕ್ಷಮಿಸುವುದಾಗಿ ಹೇಳಿದರು. ಈ ಹಿಂದೆ ನನ್ನ ಮೇಲೆ ಆರು ಬಾರಿ ದಾಳಿಯಾಗಿತ್ತು. ಇದು ಏಳನೇ ದಾಳಿ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


