ರೈತರ ದೆಹಲಿ ಚಲೋ ಪ್ರತಿಭಟನಾ ಮೆರವಣಿಗೆ: ಹರಿಯಾಣದ 7 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆ ಸ್ಥಗಿತ!
ಫೆಬ್ರವರಿ 13 ರಂದು ರೈತರ ಉದ್ದೇಶಿತ 'ದೆಹಲಿ ಚಲೋ' ಮೆರವಣಿಗೆಗೆ ಮುಂಚಿತವಾಗಿ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳು ಮತ್ತು ಒಮ್ಮೆಲೇ ಹೆಚ್ಚು ಎಸ್ ಎಂಎಸ್ ಕಳುಹಿಸುವ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಹರಿಯಾಣ ಸರ್ಕಾರ ಶನಿವಾರ ಆದೇಶಿಸಿದೆ.

'ಚಂಡೀಗಡ: ಫೆಬ್ರವರಿ 13 ರಂದು ರೈತರ ಉದ್ದೇಶಿತ 'ದೆಹಲಿ ಚಲೋ' ಮೆರವಣಿಗೆಗೆ ಮುಂಚಿತವಾಗಿ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಗಳು ಮತ್ತು ಒಮ್ಮೆಲೇ ಹೆಚ್ಚು ಎಸ್ ಎಂಎಸ್ ಕಳುಹಿಸುವ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಹರಿಯಾಣ ಸರ್ಕಾರ ಶನಿವಾರ ಆದೇಶಿಸಿದೆ.
ಅಧಿಕೃತ ಆದೇಶದ ಪ್ರಕಾರ, ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಫೆಬ್ರವರಿ 11 ರಂದು ಬೆಳಿಗ್ಗೆ 6 ರಿಂದ ಫೆಬ್ರವರಿ 13 ರ ಮಧ್ಯಾಹ್ನ 12 ಗಂಟೆಯವರೆಗೂ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ ಸಂಘಟನೆ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಸೇರಿದಂತೆ 200 ಕ್ಕೂ ಹೆಚ್ಚು ರೈತ ಸಂಘಗಳು ಫೆಬ್ರವರಿ 13 ರಂದು 'ದೆಹಲಿ ಚಲೋ' ಮೆರವಣಿಗೆಯನ್ನು ಆಯೋಜಿಸಿವೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಅಂಗೀಕರಿಸಿ ಕಾನೂನು ಜಾರಿಗೆ ತರುವಂತೆ ಕೇಂದ್ರವನ್ನು ಒತ್ತಾಯಿಸಿ ದಿಲ್ಲಿ ಚಲೋ ನಡೆಯಲಿದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


