ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕ ಬಂಧನ, 1.70 ಕೋಟಿ ರೂ. ಮೌಲ್ಯದ 2 ಐಷಾರಾಮಿ ಕೈಗಡಿಯಾರ ವಶ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಂಡೀಗಢದ ಒಂದು ಸ್ಥಾನವನ್ನು ಹೊರತುಪಡಿಸಿ ಪಂಜಾಬ್‌ನ ಎಲ್ಲಾ 13 ಸ್ಥಾನಗಳಲ್ಲಿ ಎಎಪಿ ಸ್ಪರ್ಧಿಸುವುದಾಗಿ ಶನಿವಾರ ಘೋಷಿಸಿದೆ. ಇದರಿಂದಾಗಿ ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರನ್ನು ಬಂಧಿಸಿದ್ದು, 1.70 ಕೋಟಿ ರೂಪಾಯಿ ಬೆಲೆಬಾಳುವ ಎರಡು ಐಷಾರಾಮಿ ಕೈಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.
ಖಚಿತ ಮಾಹಿತಿ ಮೇರೆಗೆ ಇತ್ತೀಚಿಗೆ ಹಾಂಗ್ ಕಾಂಗ್‌ನಿಂದ ಆಗಮಿಸಿದಾಗ ಇಲಾಖೆಯ ತಂಡ ಆತನನ್ನು ಪರಿಶೀಲನೆ ನಡೆಸಿದೆ. ಈ ವೇಳೆ ಆತನ ಲಗೇಜಿನಲ್ಲಿ ಬಚ್ಚಿಟ್ಟಿದ್ದ 1.7 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ವಾಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ತನಿಖೆ ವೇಳೆ ಆತ ಸಾಗಾಟದಾರನಾಗಿ ನಟಿಸಿದ್ದು, ಹಣದ ಲಾಭಕ್ಕಾಗಿ ಇನ್ನೊಬ್ಬ ವ್ಯಕ್ತಿಗೆ ಕೈಗಡಿಯಾರಗಳನ್ನು ತಲುಪಿಸಬೇಕಾಗಿತ್ತು ಎಂದು ತಿಳಿದುಬಂದಿರುವುದಾಗಿ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಪ್ರಧಾನ ಕಮಿಷನರ್ ಆರ್ ಶ್ರೀನಿವಾಸ ನಾಯ್ಕ್ ತಿಳಿಸಿದ್ದಾರೆ. ಪ್ರಯಾಣಿಕನನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


