ಸೋಷಿಯಲ್ ಮೀಡಿಯಾ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರದಿಂದ 'ಪ್ರಶಸ್ತಿ'!
ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯನಿರತರಾಗಿರುವ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಂಟೆಂಟ್ ಕ್ರಿಯೇಟರ್ಸ್‌ಗೆ 'ಪ್ರಶಸ್ತಿ' ನೀಡಲು ಮುಂದಾಗಿದೆ.

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಕಾರ್ಯನಿರತರಾಗಿರುವ ಕಂಟೆಂಟ್ ಕ್ರಿಯೇಟರ್ಸ್‌ಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಕಂಟೆಂಟ್ ಕ್ರಿಯೇಟರ್ಸ್‌ಗೆ 'ಪ್ರಶಸ್ತಿ' ನೀಡಲು ಮುಂದಾಗಿದೆ.
ಹೊಸ ಯುಗದ ಪ್ರಭಾವಿಗಳು ಮತ್ತು ಕಂಟೆಂಟ್ ಕ್ರಿಯೇಟರ್ಸ್ ಗಳನ್ನು ಗುರುತಿಸಲು ಕೇಂದ್ರ ಸರ್ಕಾರವು ನ್ಯಾಷನಲ್ ಕ್ರಿಯೇಟರ್ಸ್ ಪ್ರಶಸ್ತಿ ನೀಡಲು ಯೋಜನೆ ರೂಪಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮೊದಲ-ರೀತಿಯ ಪ್ರಶಸ್ತಿಗಳನ್ನು "Gen Z" ಅನ್ನು ಗುರಿಯಾಗಿರಿಸಿಕೊಳ್ಳಲಾಗುತ್ತದೆ. ಸುಮಾರು 20 ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗುವುದು. ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ರಭಾವಿಗಳು ಪ್ರಶಸ್ತಿಗಾಗಿ ಸ್ಪರ್ಧೆಯಲ್ಲಿರುತ್ತಾರೆ ಎಂದು ಮೂಲಗಳು ತಿಳಿಸಿವೆ.
ದೇಶದ ಮೃದು ಶಕ್ತಿ ಮತ್ತು ಸಂಸ್ಕೃತಿಯನ್ನು ಅಂತರಾಷ್ಟ್ರೀಯವಾಗಿ ಹರಡಲು ಸಹಾಯ ಮಾಡಿದವರಿಗೆ ಒಂದು ವಿಭಾಗದಲ್ಲಿ ಪ್ರಶಸ್ತಿ ನೀಡಲಾಗುತ್ತದೆ. ಇತರ ವಿಭಾಗಗಳು "ಗ್ರೀನ್ ಚಾಂಪಿಯನ್ಸ್", "ಸ್ವಚ್ಛತಾ ರಾಯಭಾರಿಗಳು", "ಕೃಷಿ ಸೃಷ್ಟಿಕರ್ತರು" ಮತ್ತು "ಟೆಕ್ ಕ್ರಿಯೇಟರ್ಸ್" ವಿಭಾಗಗಳಲ್ಲೂ ಪ್ರಶಸ್ತಿ ನೀಡಲು ಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿವಿಧ ಭಾಷೆ ಮತ್ತು ವಿಭಾಗಗಳ ಚಲನಚಿತ್ರಗಳನ್ನು ಗುರುತಿಸುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಮಾದರಿಯಲ್ಲಿ ಪ್ರಶಸ್ತಿಗಳು ಇರುತ್ತವೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


