ಪ್ರಧಾನಿ ಮೋದಿಯಿಂದ ಯುಎಇನಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟನೆ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರದಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದು, ಈ ಯಸಂದರ್ಭದಲ್ಲಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರದಿಂದ ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದು, ಈ ಯಸಂದರ್ಭದಲ್ಲಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಮತ್ತು ಅಬುಧಾಬಿಯಲ್ಲಿ ನಿರ್ಮಾಣವಾಗಿರುವ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.
2015 ರಿಂದ ಯುಎಇಗೆ ಪ್ರಧಾನಿ ಮೋದಿ ಅವರ ಏಳನೇ ಭೇಟಿ ಇದಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶನಿವಾರ ತಿಳಿಸಿದೆ.
ಮೋದಿ ಮತ್ತು ಅಲ್ ನಹ್ಯಾನ್ ಅವರು ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನಷ್ಟು ಗಟ್ಟಿಗೊಳಿಸುವ ಮತ್ತು ವಿಸ್ತರಿಸುವ ಮಾರ್ಗಗಳನ್ನು ಬಗ್ಗೆ ಚರ್ಚಿಸಲಿದ್ದಾರೆ ಮತ್ತು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಅಂತರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
"ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ದುಬೈನಲ್ಲಿ ನಡೆಯಲಿರುವ ವಿಶ್ವ ಸರ್ಕಾರದ ಶೃಂಗಸಭೆ 2024 ರಲ್ಲಿ ಗೌರವ ಅತಿಥಿಯಾಗಿ ಭಾಗವಹಿಸುತ್ತಾರೆ ಮತ್ತು ಶೃಂಗಸಭೆಯಲ್ಲಿ ವಿಶೇಷ ಭಾಷಣವನ್ನು ಮಾಡುತ್ತಾರೆ" ಎಂದು MEA ತಿಳಿಸಿದೆ.
ಅಬುಧಾಬಿಯ ಮೊದಲ ಹಿಂದೂ ದೇವಾಲಯವಾದ BAPS ಮಂದಿರವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದು ಎಂಇಎ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


