ರಾಜ್ಯಸಭೆ ಚುನಾವಣೆಗೆ BJP ಅಭ್ಯರ್ಥಿಗಳ ಪಟ್ಟಿ ಪ್ರಕಟ: ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆ ಟಿಕೆಟ್!
ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟ ಮಾಡಿದ್ದು ಮಾಜಿ ಸಚಿವ ವಿ. ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಕರ್ನಾಟಕದಿಂದ ನಾರಾಯಣ ಭಾಂಡಗೆ ಸ್ಪರ್ಧಿಸುತ್ತಿದ್ದಾರೆ.

ನವದೆಹಲಿ: ರಾಜ್ಯಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಪ್ರಕಟ ಮಾಡಿದ್ದು ಮಾಜಿ ಸಚಿವ ವಿ. ಸೋಮಣ್ಣಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದು ಕರ್ನಾಟಕದಿಂದ ನಾರಾಯಣ ಭಾಂಡಗೆ ಸ್ಪರ್ಧಿಸುತ್ತಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡೆರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ ಸೋಮಣ್ಣ ಅವರು ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದರು. ನಂತರ ರಾಜ್ಯಸಭೆ ಟಿಕೆಟ್ ಸಿಗುವ ಭರವಸೆಯನ್ನು ಸೋಮಣ್ಣ ವ್ಯಕ್ತಪಡಿಸಿದ್ದರು. ಆದರೆ ಸೋಮಣ್ಣ ಬದಲಿಗೆ ನಾರಾಯಣ ಭಾಂಡಗೆಗೆ ಟಿಕೆಟ್ ನೀಡಲಾಗಿದೆ.
ಗದಗ ಮೂಲದ ಮಾಜಿ ಎಂಎಲ್‌ಸಿ ನಾರಾಯಣ ಭಾಂಡಗೆ ಅವರು ಬಿಜೆಪಿ ಉಪಾಧ್ಯಕ್ಷರಾಗಿ ಮತ್ತು ರಾಜ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನುಳಿದಂತೆ ಬಿಹಾರದಲ್ಲಿ ಡಾ. ಧರ್ಮಶೀಲಾ ಗುಪ್ತಾ ಹಾಗೂ ಡಾ. ಭೀಮಸಿಂಗ್, ಛತ್ತೀಸ್ಗಢದಲ್ಲಿ ರಾಜಾ ದೇವೇಂದ್ರ ಪ್ರತಾಪ್ ಸಿಂಗ್, ಹರಿಯಾಣದಲ್ಲಿ ಸುಭಾಷ್ ಬಾರ್ಲಾ, ಉತ್ತರಾಖಂಡ್ ದಲ್ಲಿ ಮಹೇಂದ್ರ ಭಟ್, ಪಶ್ಚಿಮ ಬಂಗಾಳದಲ್ಲಿ ಸಮಿಕಾ ಭಟ್ಟಾಚಾರ್ಯಗೆ ಟಿಕೆಟ್ ನೀಡಲಾಗಿದೆ.
ಇನ್ನು ಉತ್ತರ ಪ್ರದೇಶದಲ್ಲಿ ಆರ್.ಪಿ.ಎನ್ ಸಿಂಗ್, ಸುಭಾಂಶು ತ್ರಿವೇದಿ, ಚೌಧರಿ ತೇಜ್ವೀರ್ ಸಿಂಗ್, ಸಾಧನಾ ಸಿಂಗ್, ಅಮರಪಾಲ್ ಮೌರ್ಯ, ಸಂಗೀತಾ ಬಲ್ವಂತ್, ನವೀನ್ ಜೈನ್ ಗೆ ಟಿಕೆಟ್ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


