ಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ಮನೀಶ್ ಸಿಸೋಡಿಯಾಗೆ ಮಧ್ಯಂತರ ಜಾಮೀನು
ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ "ಹಗರಣ"ದಲ್ಲಿ ಬಂಧಿತರಾಗಿರುವ ಹಿರಿಯ ಎಎಪಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತಮ್ಮ ಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯ...

ನವದೆಹಲಿ: ಈಗ ರದ್ದಾಗಿರುವ ದೆಹಲಿ ಅಬಕಾರಿ ನೀತಿ "ಹಗರಣ"ದಲ್ಲಿ ಬಂಧಿತರಾಗಿರುವ ಹಿರಿಯ ಎಎಪಿ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ತಮ್ಮ ಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯ ಸೋಮವಾರ ಮೂರು ದಿನಗಳ ಮಧ್ಯಂತರ ಜಾಮೀನು ನೀಡಿದೆ.
ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫೆಬ್ರವರಿ 13 ರಿಂದ 15 ರವರೆಗೆ ವಿಶೇಷ ನ್ಯಾಯಾಧೀಶ ಎಂ ಕೆ ನಾಗ್ಪಾಲ್ ಅವರು ಸಿಸೋಡಿಯಾಗೆ ಜಾಮೀನು ಮಂಜೂರು ಮಾಡಿದ್ದಾರೆ.
ಫೆಬ್ರವರಿ 2023 ರಲ್ಲಿ, ದೆಹಲಿಯ ಹೊಸ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ. ಅಬಕಾರಿ ನೀತಿಯಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ ನಂತರ ಈ ನೀತಿಯನ್ನು ಹಿಂಪಡೆಯಲಾಗಿದೆ.
ಸದ್ಯ ಸಿಸೋಡಿಯಾ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಎಎಪಿ ನಾಯಕನಿಗೆ ಜಾಮೀನು ನಿರಾಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


