ದೇಶ

ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಾಸ್ಪದ ಸಾವು

ನಟಿ, ಗಾಯಕಿ ಮಲ್ಲಿಕಾ ರಜಪೂತ್ ನಿಧನ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ಸುಲ್ತಾನಪುರದ ಮಲ್ಲಿಕಾ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲ್ಲಿಕಾ ಮೃತದೇಹ ಪತ್ತೆಯಾಗಿದೆ.

ಗಾಯಕಿ, ನಟಿ ಮಲ್ಲಿಕಾ ರಜಪೂತ್ ಅನುಮಾನಾಸ್ಪದ ಸಾವು
ಮಲ್ಲಿಕಾ ರಜಪೂತ್
Published On :

ನಟಿ, ಗಾಯಕಿ ಮಲ್ಲಿಕಾ ರಜಪೂತ್ ನಿಧನ ಹೊಂದಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ಸುಲ್ತಾನಪುರದ ಮಲ್ಲಿಕಾ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲ್ಲಿಕಾ ಮೃತದೇಹ ಪತ್ತೆಯಾಗಿದೆ.

ಸುಲ್ತಾನ್‌ಪುರದ ಖ್ಯಾತ ಗಾಯಕಿ ಮತ್ತು ನಟಿ ವಿಜಯ ಲಕ್ಷ್ಮಿ ಅಲಿಯಾಸ್ ಮಲ್ಲಿಕಾ ರಜಪೂತ್  ಅವರು ಫೆ.13ರಂದು ತಮ್ಮ ಸ್ವಗೃಹದಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಕಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದ್ದು, ಅವರ ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸ್ಪಷ್ಟನೆ ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಕಷ್ಟು ಸಿನಿಮಾಗಳಿಗೆ ಹಾಡಿದ್ದ 35 ವರ್ಷದ ಗಾಯಕಿ ಕಮ್ ನಟಿ ಮಲ್ಲಿಕಾ ರಜಪೂರ್ ಅವರ ಮೃತದೇಹ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾಕುಂಡ್ ಪ್ರದೇಶದ ತನ್ನ ಮನೆಯ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಸಾವು ಅನುಮಾನಾಸ್ಪದವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ಮಲ್ಲಿಕಾ ತಾಯಿ, ‘ಮಗಳು ಆರಾಮವಾಗಿಯೇ ಇದ್ದಳು, ಇಂದು ಬೆಳಿಗ್ಗೆ ಎದ್ದಾಗ ಆಕೆಯ ಕೋಣೆಯ ಬಾಗಿಲು ಹಾಕಿತ್ತು, ಲೈಟ್ ಆನ್ ಆಗಿತ್ತು. ಬಾಗಿಲು ತಟ್ಟಿದಾಗ ತೆಗೆಯಲಿಲ್ಲ, ನಾನು ಕಿಟಕಿಯಿಂದ ನೋಡಿದಾಗ ಮಗಳು ನಿಂತಿರುವಂತೆ ಕಂಡಿತು. ಬಳಿಕ ಆಕೆಯ ತಂದೆಯನ್ನು ಇನ್ನಿತರರನ್ನು ಕರೆಸಿ ಕದ ಒಡೆಸಿದಾಗ ಮಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದಳು’ ಎಂದಿದ್ದಾರೆ.

ಮಲ್ಲಿಕಾ ರಜಪೂತ್, ‘ರಿವಾಲ್ವರ್ ರಾಣಿ’ ಸಿನಿಮಾದಲ್ಲಿ ಕಂಗನಾ ರಣೌತ್ ಜೊತೆ ನಟಿಸಿದ್ದರು. ಗಾಯಕಿಯೂ ಆಗಿದ್ದ ಮಲ್ಲಿಕಾ ಶಾನ್​ರ ಆಲ್ಬಂನಲ್ಲಿ ಹಾಡಿದ್ದರು, ನಟಿಸಿದ್ದರು ಸಹ. ಕಥಕ್ ನೃತ್ಯಗಾರ್ತಿಯೂ ಆಗಿದ್ದ ಮಲ್ಲಿಕಾ ನೃತ್ಯ ಪ್ರದರ್ಶನಗಳನ್ನು ಸಹ ನೀಡಿದ್ದಾರೆ. ರಾಜಕೀಯದಲ್ಲಿಯೂ ಆಸಕ್ತಿ ಇರಿಸಿಕೊಂಡಿದ್ದ ಮಲ್ಲಿಕಾ 2022ರಲ್ಲಿ ಉತ್ತರ ಪ್ರದೇಶ ಬಿಜೆಪಿ ಸೇರ್ಪಡೆಗೊಂಡಿದ್ದರು, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸ್ಥಾನವನ್ನು ಸಹ ಅವರಿಗೆ ನೀಡಲಾಗಿತ್ತು. ಆದರೆ ಇತ್ತೀಚೆಗೆ ಬಿಜೆಪಿಯಿಂದ ದೂರ ಉಳಿದಿದ್ದ ಮಲ್ಲಿಕಾ ಅಧ್ಯಾತ್ಮದ ಕಡೆಗೆ ಹೊರಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.