ನವದೆಹಲಿ: ಅಲಿಪುರ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ, ಏಳು ಮಂದಿ ಸಾವು
ಉತ್ತರ ದೆಹಲಿಯ ಅಲಿಪುರದಲ್ಲಿರುವ ದಯಾಲ್‌ಪುರ್ ಮಾರುಕಟ್ಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ನವದೆಹಲಿ: ಉತ್ತರ ದೆಹಲಿಯ ಅಲಿಪುರದಲ್ಲಿರುವ ದಯಾಲ್‌ಪುರ್ ಮಾರುಕಟ್ಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿರುವ ಬಣ್ಣದ ಕಾರ್ಖಾನೆಯೊಂದರಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಸುಟ್ಟ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಸಂಜೆ 5.25 ಕ್ಕೆ ಬೆಂಕಿ ಅವಘಡದ ಕರೆ ಸ್ವೀಕರಿಸಿದ್ದು, ಬೆಂಕಿ ನಂದಿಸಲು 22 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


