ಈಶಾನ್ಯ ದೆಹಲಿ ಹಿಂಸಾಚಾರ: ಮೂರು ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ನವದೆಹಲಿ: ಈಶಾನ್ಯ ದೆಹಲಿ ಗಲಭೆ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ದೆಹಲಿ ನ್ಯಾಯಾಲಯ 2020ರಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಐವರಲ್ಲಿ ನಾಲ್ವರನ್ನು ಕೊಲೆ-ಗಲಭೆ ಆರೋಪಗಳಿಂದ ಖುಲಾಸೆಗೊಳಿಸಿದೆ.
ಈ ಪ್ರಕರಣಗಳು ಈಶಾನ್ಯ ದೆಹಲಿಯ ದಯಾಳ್ ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರದೇಶಕ್ಕೆ ಸಂಬಂಧಿಸಿವೆ. 2020 ರ ಫೆಬ್ರವರಿಯಲ್ಲಿ ನಡೆದ ಗಲಭೆಯ ಸಮಯದಲ್ಲಿ ಮೂವರ ಕೊಲೆ ಸಂಬಂಧ ಈ ಪ್ರಕರಣಗಳನ್ನು 2020ರಲ್ಲಿ ದಾಖಲಿಸಲಾಗಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ ಜೆ) ಪುಲಸ್ತ್ಯ ಪ್ರಮಾಚಲ 5 ಆರೋಪಿಗಳಲ್ಲಿ ಅಶೋಕ್ ಕುಮಾರ್, ಅಜಯ್ ಅಲಿಯಾಸ್ ಮೋನು, ಶುಭಂ ಮತ್ತು ಜಿತೇಂದರ್ ಕುಮಾರ್ ಅವರನ್ನು ಕೊಲೆ-ಗಲಭೆ ಆರೋಪಗಳಿಂದ ಖುಲಾಸೆಗೊಳಿಸಿದ್ದಾರೆ.
5ನೇ ವ್ಯಕ್ತಿಯಾದ ಆರಿಫ್ ಅಲಿಯಾಸ್ ಮೋಟಾ ವಿರುದ್ಧ ಕೊಲೆ ಅಪರಾಧದ ಆರೋಪ ಹೊರಿಸಲಾಗಿಲ್ಲ. ಗಲಭೆಗೆ ಸಂಬಂಧಿಸಿದ ಇತರ ಅಪರಾಧಗಳಿಂದ ಆತನನ್ನು ಖುಲಾಸೆಗೊಳಿಸಲಾಗಿದೆ. ಮೆಹತಾಬ್, ಜಾಕೀರ್ ಮತ್ತು ಅಶ್ಫಾಕ್ ಹುಸೇನ್ ಅವರ ಹತ್ಯೆಗಳಿಗೆ ಸಂಬಂಧಿಸಿದಂತೆ ಈ ಪ್ರಕರಣಗಳು ದಾಖಲಾಗಿವೆ.
ಆರೋಪಿಗಳನ್ನು ಖುಲಾಸೆಗೊಳಿಸುವಾಗ, ಯಾವುದೇ ಆರೋಪಿಗಳು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ಗಲಭೆಕೋರರ ಭಾಗವಾಗಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದ್ದರಿಂದ, ಈ ಪ್ರಕರಣದಲ್ಲಿ ಎಲ್ಲಾ ಆರೋಪಿಗಳನ್ನು ಅವರ ವಿರುದ್ಧದ ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




