ದೇಶ

ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಬಿಗಿ ಭದ್ರತೆ!

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಮ್ಮುವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೇನಾ ಪಡೆಗಳು ನಗರ ಮತ್ತಿತರ ಕಡೆಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ, ಬಿಗಿ ಭದ್ರತೆ!
ಭದ್ರತಾ ಪಡೆಗಳು — PTI
Published On :

ಕಾಶ್ಮೀರ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಜಮ್ಮುವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಪೊಲೀಸರು ಮತ್ತು ಅರೆಸೇನಾ ಪಡೆಗಳು ನಗರ ಮತ್ತಿತರ ಕಡೆಗಳಲ್ಲಿ ವಾಹನಗಳ ತಪಾಸಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಶ್ರೀನಗರದ ವಿವಿಧ ಸ್ಥಳಗಳ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ವಿಶೇಷ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. ಪ್ರಧಾನಿ ಜಮ್ಮುವಿಗೆ ಭೇಟಿ ನೀಡುತ್ತಿದ್ದರೂ, ಕೇಂದ್ರಾಡಳಿತ ಪ್ರದೇಶದಲ್ಲಿ ಭಯೋತ್ಪಾದಕರು ಯಾವುದೇ ವಿಧ್ವಂಸಕ ಚಟುವಟಿಕೆಗಳನ್ನು ನಡೆಸದಂತೆ ನೋಡಿಕೊಳ್ಳಲು ಕಣಿವೆಯಲ್ಲಿ ಭದ್ರತಾ ಏಜೆನ್ಸಿಗಳನ್ನು ಅಲರ್ಟ್ ಮಾಡಲಾಗಿದೆ ಎಂದು ಅವರು ಹೇಳಿದರು.

ತಮ್ಮ ಎರಡನೇ ಅಧಿಕಾರಾವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಮೋದಿಯವರ ಎರಡನೇ ಭೇಟಿ ಇದಾಗಿದೆ. ಜಮ್ಮುವಿನ ಏಮ್ಸ್ ಆಸ್ಪತ್ರೆ, ಚೆನಾಬ್ ನದಿಯ ಮೇಲಿನ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಮತ್ತು ಉಧಮ್‌ಪುರದ ದೇವಿಕಾ ನದಿ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸುವ ನಿರೀಕ್ಷೆಯಿದೆ.

ಮೋದಿ ಅವರು ಸಂಗಲ್ದನ್-ಬಾರಾಮುಲ್ಲಾ ಸಂಪರ್ಕಿಸುವ ಮೊದಲ ರೈಲನ್ನು ಉದ್ಘಾಟಿಸುವ ಸಾಧ್ಯತೆಯಿದೆ. ನಂತರ ಜಮ್ಮುವಿನಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.