ಫೆಮಾ ಉಲ್ಲಂಘನೆ ಪ್ರಕರಣ: ಇಡಿ ವಿಚಾರಣೆಗೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಗೈರು
ಮಹುವಾ ಮೊಯಿತ್ರಾ ಅವರು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ(ಇಡಿ)ದ ವಿಚಾರಣೆಗೆ ಗೈರು ಆಗಿದ್ದಾರೆ.

ನವದೆಹಲಿ: ಟಿಎಂಸಿ ನಾಯಕಿ ಹಾಗೂ ಮಾಜಿ ಸಂಸದೆ ಮಹುವಾ ಮೊಯಿತ್ರಾ ಅವರು ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಜಾರಿ ನಿರ್ದೇಶನಾಲಯ(ಇಡಿ)ದ ವಿಚಾರಣೆಗೆ ಗೈರು ಆಗಿದ್ದಾರೆ.
ಫೆಬ್ರವರಿ 15 ರಂದು ಮೊಯಿತ್ರಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದ ಇಡಿ, ಪ್ರಕರಣ ಸಂಬಂಧ ಫೆಬ್ರವರಿ 19 ರಂದು ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ವಿದೇಶಿ ಹೂಡಿಕೆಗಳಿಗೆ ಸಂಬಂಧಿಸಿದ ಕೆಲವು ದಾಖಲೆಗಳೊಂದಿಗೆ ದೆಹಲಿಯಲ್ಲಿರುವ ಇಡಿ ಪ್ರಧಾನ ಕಛೇರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಟಿಎಂಸಿ ನಾಯಕಿಗೆ ಸೂಚಿಸಲಾಗಿತ್ತು. ಆದರೆ ಮಹುವಾ ಮೊಯಿತ್ರಾ ಅವರು ಇಂದು ಇಡಿ ವಿಚಾರಣೆಗೆ ಗೈರು ಆಗಿದ್ದಾರೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ(FEMA) ನಿಬಂಧನೆಗಳ ಅಡಿಯಲ್ಲಿ ಟಿಎಂಸಿ ಮಾಜಿ ಸಂಸದೆಯ ಹೇಳಿಕೆಯನ್ನು ದಾಖಲಿಸಲಾಗುತ್ತದೆ ಎಂದು ಇಡಿ ಮೂಲಗಳು ತಿಳಿಸಿದ್ದವು.
ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಉಚ್ಚಾಟಿಸಲಾಗಿದೆ.
ಮೊಯಿತ್ರಾ ಅವರು ಹಣಕ್ಕಾಗಿ ರಾಷ್ಟ್ರೀಯ ಭದ್ರತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



