ದೇಶ

ಚಂಡೀಗಢ ಮೇಯರ್ ಚುನಾವಣೆ: ಎಂಟು 'ಅಸಿಂಧು' ಮತಗಳನ್ನೂ ಸೇರಿಸಿ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಲ್ಲಿ 'ಅಸಿಂಧು'ಗೊಳಿಸಲಾದ ಎಂಟು ಮತಗಳನ್ನೂ ಸೇರಿಸಿ ಮತಗಳ ಮರುಎಣಿಕೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಚಂಡೀಗಢ ಮೇಯರ್ ಚುನಾವಣೆ: ಎಂಟು 'ಅಸಿಂಧು' ಮತಗಳನ್ನೂ ಸೇರಿಸಿ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಆದೇಶ
ಅನಿಲ್ ಮಸಿಹ್
Published On :

ನವದೆಹಲಿ: ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚಲಾವಣೆಯಲ್ಲಿ 'ಅಸಿಂಧು'ಗೊಳಿಸಲಾದ ಎಂಟು ಮತಗಳನ್ನೂ ಸೇರಿಸಿ ಮತಗಳ ಮರುಎಣಿಕೆ ಮಾಡಿ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶನ ನೀಡಿದೆ.

ಚುನಾವಣಾ ಅಧಿಕಾರಿ ಅನಿಲ್ ಮಸಿಹ್ ಅವರು ಚುನಾವಣೆಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಿ ಪರಾಜಿತ ಎಎಪಿ ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ರಿಜಿಸ್ಟ್ರಾರ್ ಜನರಲ್ ನೇಮಿಸಿದ ನ್ಯಾಯಾಂಗ ಅಧಿಕಾರಿಯೊಬ್ಬರು ತನ್ನ ಮುಂದೆ ಹಾಜರುಪಡಿಸಿದ ಮತಪತ್ರಗಳನ್ನು ಮತ್ತು ಇಡೀ ಚುನಾವಣಾ ಪ್ರಕ್ರಿಯೆಯ ವಿಡಿಯೋವನ್ನು ಸರ್ವೋಚ್ಚ ನ್ಯಾಯಾಲಯವು ಪರಿಶೀಲಿಸುತ್ತಿದೆ.

"ಅಸಿಂಧುಗೊಂಡ ಮತಪತ್ರಗಳನ್ನು ನೋಡಲು ನಾವು ಬಯಸುತ್ತೇವೆ" ಎಂದು ಸಿಜೆಐ ಆರಂಭದಲ್ಲಿ ಹೇಳಿದರು. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ.

ಸೋಮವಾರ ಸುಪ್ರೀಂ ಕೋರ್ಟ್‌ ನಲ್ಲಿ ವಿಚಾರಣೆಗೆ ಹಾಜರಾದ ಚುನಾವಣಾ ಅಧಿಕಾರಿ ಅನಿಲ್‌ ಮೆಸಿಹ್‌ ಅವರು ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಅವರ ನೇತೃತ್ಬದ ಪೀಠ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತಲ್ಲದೆ ಕುದುರೆ ವ್ಯಾಪಾರದ ವಿರುದ್ಧ ಕಳವಳ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.