ಎಎಪಿಯ ಕುಲದೀಪ್ ಕುಮಾರ್ ಚಂಡೀಗಢದ ಚುನಾಯಿತ ಮೇಯರ್: ಸುಪ್ರೀಂ ಕೋರ್ಟ್ ಘೋಷಣೆ
ಆಗಿ ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಚಂಡೀಗಢದ ಚುನಾಯಿತ ಮೇಯರ್ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ.

ನವದೆಹಲಿ: ಆಗಿ ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಚಂಡೀಗಢದ ಚುನಾಯಿತ ಮೇಯರ್ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ.
ಇದಕ್ಕು ಮುನ್ನ 8 ‘ಅಸಿಂಧು’ ಮತಗಳನ್ನು ಸೇರಿಸಿ ಮತಗಳ ಮರುಎಣಿಕೆ ಮಾಡುವಂತೆ ನಿರ್ದೇಶಿಸಿದ್ದ ಸುಪ್ರೀಂ ಕೋರ್ಟ್, ಈಗ ಮರು ಎಣಿಕೆಯ ನಂತರ ಫಲಿತಾಂಶ ಪ್ರಕಟಿಸಿದೆ.
ಈ ಹಿಂದೆ ಮತಪತ್ರಗಳನ್ನು ತಿರುಚಿ ಬಿಜೆಪಿ ಅಭ್ಯರ್ಥಿಯನ್ನು ಮೇಯರ್ ಎಂದು ಘೋಷಿಸಿದ್ದ ರಿಟರ್ನಿಂಗ್ ಅಧಿಕಾರಿ ಅನಿಲ್ ಮಸೀಹ್ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಆದೇಶಿಸಿದೆ.
ಚುನಾವಣಾ ಅಧಿಕಾರಿ ಉದ್ದೇಶಪೂರ್ವಕವಾಗಿ ಮತಪತ್ರಗಳನ್ನು ತಿರುಚಿದ್ದಾರೆ. ಅವರ ದುಷ್ಕೃತ್ಯಕ್ಕಾಗಿ ಕಾನೂನು ಕ್ರಮ ಜರುಗಿಸಲು ಸುಪ್ರೀಂ ಕೋರ್ಟ್ ಸೂಚಿಸಿದೆ.
ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಹಾಜರಾದ ಚುನಾವಣಾ ಅಧಿಕಾರಿ ಅನಿಲ್ ಮೆಸಿಹ್ ಅವರು ಮತಪತ್ರಗಳನ್ನು ತಿರುಚಿದ್ದನ್ನು ಒಪ್ಪಿಕೊಂಡಿದ್ದರು. ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ನೇತೃತ್ಬದ ಪೀಠ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿತ್ತಲ್ಲದೆ ಕುದುರೆ ವ್ಯಾಪಾರದ ವಿರುದ್ಧ ಕಳವಳ ವ್ಯಕ್ತಪಡಿಸಿತ್ತು.
ಈ "ಕಷ್ಟದ ಸಮಯದಲ್ಲಿ" ಸುಪ್ರೀಂ ಕೋರ್ಟ್ ಪ್ರಜಾಪ್ರಭುತ್ವವನ್ನು ಉಳಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮಂಗಳವಾರ ಹೇಳಿದ್ದಾರೆ. ಚಂಡೀಗಢ ಮೇಯರ್ ಚುನಾವಣೆ ಪ್ರಕರಣದಲ್ಲಿ ನ್ಯಾಯಾಲಯದ ನಿರ್ಧಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



