ಹರಿಯಾಣ: ಬಿಜೆಪಿ-ಜೆಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲು
ಹರಿಯಾಣದಲ್ಲಿ ಭಾರತೀಯ ಜನತಾ ಪಾರ್ಟಿ-ಜನನಾಯಕ್ ಜನತಾ ಪಾರ್ಟಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಗುರುವಾರ ಧ್ವನಿ ಮತದ ಮೂಲಕ ಸೋಲಿಸಲಾಗಿದೆ.

ಚಂಡೀಗಢ: ಹರಿಯಾಣದಲ್ಲಿ ಭಾರತೀಯ ಜನತಾ ಪಾರ್ಟಿ-ಜನನಾಯಕ್ ಜನತಾ ಪಾರ್ಟಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯವನ್ನು ಗುರುವಾರ ಧ್ವನಿ ಮತದ ಮೂಲಕ ಸೋಲಿಸಲಾಗಿದ್ದು, ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಬಹುಮತ ಸಾಬೀತುಪಡಿಸಿದ್ದಾರೆ.
ನಿರ್ಣಯದ ಮೇಲೆ ನಾಲ್ಕು ಗಂಟೆಗಳ ಕಾಲ ನಡೆದ ಚರ್ಚೆಯ ಕೊನೆಯಲ್ಲಿ ಮುಖ್ಯಮಂತ್ರಿಯವರ ಉತ್ತರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿ, ಸದನದಿಂದ ಹೊರನಡೆದರು.
ನಂತರ ಧ್ವನಿ ಮತದ ಮೂಲಕ ಅವಿಶ್ವಾಸ ನಿರ್ಣಯವನ್ನು ಸೋಲಿಸಲಾಗಿದೆ ಎಂದು ಸ್ಪೀಕರ್ ಗಿಯಾನ್ ಚಂದ್ ಗುಪ್ತಾ ಅವರು ಹೇಳಿದರು.
ಮನೋಹರ್ ಲಾಲ್ ಖಟ್ಟರ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಂಡಿಸಿದ ಎರಡನೇ ಅವಿಶ್ವಾಸ ನಿರ್ಣಯ ಇದಾಗಿದೆ.
ಪ್ರಸ್ತುತ, 90 ಸದಸ್ಯ ಬಲದ ಹರಿಯಾಣ ವಿಧಾನಸಭೆಯಲ್ಲಿ ಬಿಜೆಪಿ 41 ಶಾಸಕರನ್ನು ಹೊಂದಿದ್ದರೆ, ಅದರ ಮಿತ್ರ ಪಕ್ಷ ಜನನಾಯಕ್ ಜನತಾ ಪಕ್ಷವು 10 ಶಾಸಕರನ್ನು ಹೊಂದಿದೆ. ಏಳು ಪಕ್ಷೇತರ ಶಾಸಕರ ಪೈಕಿ ಆರು ಶಾಸಕರು ಬಿಜೆಪಿಯನ್ನು ಬೆಂಬಲ ನೀಡಿದ್ದಾರೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ 30 ಶಾಸಕರನ್ನು ಹೊಂದಿದೆ ಮತ್ತು ಭಾರತೀಯ ರಾಷ್ಟ್ರೀಯ ಲೋಕದಳದ ಒಬ್ಬ ಶಾಸಕರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



