ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಹೇಮಂತ್ ಸೋರೆನ್‌ಗೆ ಅನುಮತಿ ನಿರಾಕರಿಸಿದ ಕೋರ್ಟ್
ರಾಜ್ಯ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಬಂಧಿತ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಅನುಮತಿ ನಿರಾಕರಿಸಿದೆ.

ರಾಂಚಿ: ಶುಕ್ರವಾರದಿಂದ ಪ್ರಾರಂಭವಾಗುವ ರಾಜ್ಯ ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಬಂಧಿತ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರಿಗೆ ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಅನುಮತಿ ನಿರಾಕರಿಸಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜನವರಿ 31 ರಂದು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಸೋರೆನ್ ಅವರು ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಅನುಮತಿ ಕೋರಿ ಪಿಎಂಎಲ್‌ಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯ, ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲು ಹೇಮಂತ್ ಸೋರೆನ್‌ಗೆ ಅನುಮತಿ ನಿರಾಕರಿಸಿದೆ.
ಜಾರಿ ನಿರ್ದೇಶನಾಲಯದ 13 ದಿನಗಳ ಕಸ್ಟಡಿ ಅಂತ್ಯಗೊಂಡ ನಂತರ ಫೆಬ್ರವರಿ 15 ರಂದು ಸೋರೆನ್ ಅವರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮಾಜಿ ಸಿಎಂ ಪ್ರಸ್ತುತ ಬಿರ್ಸಾ ಮುಂಡಾ ಕೇಂದ್ರ ಕಾರಾಗೃಹದಲ್ಲಿದ್ದಾರೆ.
ಫೆಬ್ರವರಿ 5 ರಂದು ವಿಧಾನಸಭೆಯಲ್ಲಿ ನಡೆದ ವಿಶ್ವಾಸ ಮತದಲ್ಲಿ ಭಾಗವಹಿಸಲು ಸೋರೆನ್ ಅವರಿಗೆ ನ್ಯಾಯಾಲಯ ಈ ಹಿಂದೆ ಅವಕಾಶ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



