ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ: ಟಿಎಂಸಿ
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿ ಮತ್ತು ಅಸ್ಸಾಂನ ಕೆಲವು ಕ್ಷೇತ್ರಗಳಲ್ಲಿ ಹಾಗೂ ಮೇಘಾಲಯದ ಒಂದು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ.

ನವದೆಹಲಿ: ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಕ್ಷೇತ್ರಗಳಲ್ಲಿ ಮತ್ತು ಅಸ್ಸಾಂನ ಕೆಲವು ಕ್ಷೇತ್ರಗಳಲ್ಲಿ ಹಾಗೂ ಮೇಘಾಲಯದ ಒಂದು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಡೆರೆಕ್ ಒ'ಬ್ರೇನ್ ಅವರು ಶುಕ್ರವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಭಾಗವಾಗಿರುವ ಕಾಂಗ್ರೆಸ್ ಮತ್ತು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ, ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಎದುರಿಸಲು ಶೀಘ್ರದಲ್ಲೇ ಸೀಟು ಹಂಚಿಕೆಯನ್ನು ಅಂತಿಮಗೊಳಿಸಲಿದೆ ಎಂದು ವರದಿಯಾಗಿದೆ.
ಈ ಮಧ್ಯೆ, ರಾಜ್ಯಸಭೆಯ ಟಿಎಂಸಿ ನಾಯಕ ಓ'ಬ್ರೇನ್ ಅವರು, "ಕೆಲವು ವಾರಗಳ ಹಿಂದೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಂಗಾಳದ ಎಲ್ಲಾ 42 ಸ್ಥಾನಗಳಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದ್ದರು. ನಾವು ಅಸ್ಸಾಂನ ಕೆಲವು ಕ್ಷೇತ್ರಗಳಲ್ಲಿ ಮತ್ತು ಮೇಘಾಲಯದ ತುರಾ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇವೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.
ಇದಕ್ಕೂ ಮುನ್ನ ಕಾಂಗ್ರೆಸ್ ಮತ್ತು ಟಿಎಂಸಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆ ನಡೆಯುತ್ತಿದ್ದು, ಶೀಘ್ರವೇ ಅಂತಿಮಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಪಕ್ಷವಾಗಿರುವ ಟಿಎಂಸಿ ಅಸ್ಸಾಂನಲ್ಲಿ ಎರಡು ಮತ್ತು ಮೇಘಾಲಯದಲ್ಲಿ ಒಂದು ಸ್ಥಾನವನ್ನು ಕೋರಿದ್ದು, ಅದರ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



