ಉತ್ತರ ಪ್ರದೇಶ: ಕೊಳಕ್ಕೆ ಬಿದ್ದ ಟ್ರ್ಯಾಕ್ಟರ್ ಟ್ರಾಲಿ; ಮಾಘ ಹುಣ್ಣಿಮೆಯ ಗಂಗಾ ಸ್ನಾನಕ್ಕೆ ತೆರಳುತ್ತಿದ್ದ 15 ಮಂದಿ ಸಾವು
ಮಾಘ ಮಾಸದ ಹುಣ್ಣಿಮೆಯ ಪ್ರಯುಕ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದ ಭಕ್ತರ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.

ಲಕ್ನೋ: ಮಾಘ ಮಾಸದ ಹುಣ್ಣಿಮೆಯ ಪ್ರಯುಕ್ತ ಗಂಗಾಸ್ನಾನಕ್ಕೆ ತೆರಳುತ್ತಿದ್ದ ಭಕ್ತರ ಟ್ರ್ಯಾಕ್ಟರ್ ಟ್ರಾಲಿ ಕೊಳಕ್ಕೆ ಬಿದ್ದು 15 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.
ಮೃತ ಪಟ್ಟವರ ಪೈಕಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್-ಟ್ರಾಲಿ ಕೊಳಕ್ಕೆ ಬಿದ್ದು ಈ ದುರಂತ ಸಂಭವಿಸಿದೆ.
ಪಟಿಯಾಲಿ ಕೊಟ್ವಾಲಿ ಪ್ರದೇಶದ ದರಿಯಾವ್ಗಂಜ್ ನಿಲ್ದಾಣದ ಬಳಿ ಸಂಭವಿಸಿದ ಅಪಘಾತದಲ್ಲಿ ಎಂಟು ಮಕ್ಕಳು ಮತ್ತು ಏಳು ಮಹಿಳೆಯರು ಸೇರಿದಂತೆ 15 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲಿಗಢ ವಲಯದ ಐಜಿ ಶಲಭ್ ಮಾಥುರ್ ಮಾಹಿತಿ ನೀಡಿದ್ದಾರೆ. ರಸ್ತೆಯಲ್ಲಿ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ಟ್ರ್ಯಾಕ್ಟರ್ ಚಾಲಕ ನಿಯಂತ್ರಣ ಕಳೆದುಕೊಂಡಿದ್ದ ಎಂದು ಅವರು ತಿಳಿಸಿದ್ದಾರೆ.
ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿ ಕೆಸರು ತುಂಬಿದ ಕೊಳಕ್ಕೆ ಪಲ್ಟಿಯಾಗಿದ್ದರಿಂದ ಹೆಚ್ಚಿನ ಸಾವು ನೋವು ಸಂಭವಿಸಿದೆ. ಗಾಯಗೊಂಡವರನ್ನು ಕಾಸ್ಗಂಜ್ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಅಪಘಾತದ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಘಾತ ವ್ಯಕ್ತಪಡಿಸಿದ್ದಾರೆ. ತೀವ್ರ ದುಃಖ ವ್ಯಕ್ತಪಡಿಸಿದ ಅವರು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಅಪಘಾತದಲ್ಲಿ ಗಾಯಗೊಂಡವರಿಗೆ ತ್ವರಿತ ಮತ್ತು ಸಮರ್ಪಕ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾಸ್ಗಂಜ್ ಜಿಲ್ಲೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ತ್ವರಿತ ರಕ್ಷಣಾ ಕಾರ್ಯಾಚರಣೆಗೆ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



